ಕ್ರೀಡೆ

12ರಂದು ಉದ್ಘಾಟನಾ ಸಮಾರಂಭ

ಬಹುನಿರೀಕ್ಷಿತ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಸಮಾರಂಭ ಫೆ.12ರ ಗುರುವಾರದಂದು ಕ್ರೈಸ್ಟ್‍ಚರ್ಚ್ ಹಾಗೂ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

12ರಂದು ಉದ್ಘಾಟನಾ ಸಮಾರಂಭ
ಕ್ರೈಸ್ಟ್ ಚರ್ಚ್ ಕ್ರೀಡಾಂಗಣ (ಸಂಗ್ರಹ ಚಿತ್ರ)
Published On :

ಮೆಲ್ಬರ್ನ್: ಬಹುನಿರೀಕ್ಷಿತ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಸಮಾರಂಭ ಫೆ.12ರ ಗುರುವಾರದಂದು ಕ್ರೈಸ್ಟ್‍ಚರ್ಚ್ ಹಾಗೂ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೈಸ್ಟ್ ಚರ್ಚ್‍ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್‍ನ ಖ್ಯಾತ ಕಲಾವಿದರಾದ ಸೊಲೊ3 ಮಿಯೋ, ಗಿನ್ನಿ ಬ್ಲ್ಯಾಕ್‍ಮೊರ್ ಮತ್ತು ಹೇಯ್ಲಿ ವೆಸ್ಟೆನ್ರಾ ಸೇರಿದಂತೆ ಮಾಜಿ ಕ್ರಿಕೆಟಿಗರಾದ ರಿಚರ್ಡ್ ಹ್ಯಾಡ್ಲಿ, ಸ್ಟೀಫನ್ ಫ್ಲೆಮಿಂಗ್ ಹಾಗೂ ಪ್ರಸಕ್ತ ಕಿವೀಸ್ ತಂಡದ ನಾಯಕ ಬ್ರೆಂಡನ್ ಮೆಕಲಂ ಉಪಸ್ಥಿತರಿರುತ್ತಾರೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಾಲಿ ಹಾಗೂ ಮಾಜಿ ವಿಶ್ವಕಪ್ ಆಟಗಾರರು ಉಪಸ್ಥಿತರಿದ್ದು, ಸಾಂಸ್ಕೃತಿಕ ಮತ್ತು ಸಂಗೀತ ಪ್ರದರ್ಶನ ನಡೆಯಲಿದೆ.

ನಂತರ ಬಾನಂಗಳದಲ್ಲಿ ಪಟಾಕಿಗಳ ಚಿತ್ತಾರ, ಹಾಗೂ ಇನ್ನಷ್ಟೇ ಪ್ರಕಟವಾಗಬೇಕಿರುವ ವಿಶೇಷ ಸಂದರ್ಭ ಒಳಗೊಂಡಿದೆ. ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಖ್ಯಾತ ಕಲಾವಿದರು ಪ್ರದರ್ಶನ ನೀಡಲಿದ್ದು, ಫೆ.14ರಿಂದ ಆರಂಭವಾಗಲಿರುವ ಮಹತ್ವದ ಟೂರ್ನಿಗೆ ಅದ್ಧೂರಿ ಆರಂಭ ನೀಡಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.