ಕ್ರೀಡೆ

ಮೊದಲು ವಿಶ್ವಕಪ್ ಆನಂತರ ಪುತ್ರಿ

ವಿಶ್ವಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಆಸ್ಟ್ರೇಲಿಯಾದಲ್ಲಿ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ...

ಮೊದಲು ವಿಶ್ವಕಪ್ ಆನಂತರ ಪುತ್ರಿ
ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ
Published On :

ಅಡಿಲೇಡ್: ವಿಶ್ವಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಆಸ್ಟ್ರೇಲಿಯಾದಲ್ಲಿ ಸಿದ್ಧತೆ ನಡೆಸುತ್ತಿರುವ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ, ಪತ್ನಿ ಸಾಕ್ಷಿ ಮಗಳಿಗೆ ಜನ್ಮ ನೀಡಿದ್ದರೂ ಸಹ ಭಾರತಕ್ಕೆ ತೆರಳಲು ಮನಸ್ಸು ಮಾಡದೇ ವಿಶ್ವಕಪ್ ಬಗ್ಗೆ ಗಮನ ಹರಿಸಲು ಮುಂದಾಗಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಧೋನಿ, ಹೌದು ನನಗೆ ಹೆಣ್ಣು ಮಗು ಹುಟ್ಟಿದ್ದು, ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು. ನಂತರ ಮಗು ಹಾಗೂ ತಾಯಿ ನೋಡಲು ಭಾರತಕ್ಕೆ ತೆರಳುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಧೋನಿ, ನಾನು ದೇಶದ ಕಾರ್ಯದ ನಿಮಿತ್ತು ಇಲ್ಲಿಗೆ ಆಗಮಿಸಿದ್ದೇನೆ. ಮೊದಲು ದೇಶದ ಕೆಲಸ ನಂತರ ಉಳಿದ ಕೆಲಸಗಳು, ಹಾಗಾಗಿ ವಿಶ್ವಕಪ್ ಬಗ್ಗೆ ಗಮನ ಹರಿಸುತ್ತಿದ್ದು, ಭಾರತಕ್ಕೆ ಹೋಗುವ ಯೋಚನೆ ಇಲ್ಲ, ಈಗ ನನ್ನ ಪಾಲಿಗೆ ಮೊದಲು ವಿಶ್ವಕಪ್...ತದ ನಂತರ ಮಗಳು...ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.