ಕ್ರೀಡೆ

ಶತಕ ಸಿಡಿಸಿ ವಿರಾಟ್ ಕೊಹ್ಲಿ ಔಟ್

ಭರ್ಜರಿ ಶತಕ ಸಿಡಿಸುವ ಮೂಲಕ ಆಸರೆಯಾಗಿದ್ದ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಸುರೇಶ್ ರೈನಾ ಆಕರ್ಷಕ ಅರ್ಧ ಶತಕ ಸಿಡಿಸಿದ್ದಾರೆ..

ಶತಕ ಸಿಡಿಸಿ ವಿರಾಟ್ ಕೊಹ್ಲಿ ಔಟ್
ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ)
Published On :

ಅಡಿಲೇಡ್: ವಿಶ್ವಕಪ್ ಟೂರ್ನಿಯ ನಿಮಿತ್ತ ಅಡಿಲೇಡ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿಯಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸರೆಯಾಗಿದ್ದ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಸುರೇಶ್ ರೈನಾ ಆಕರ್ಷಕ ಅರ್ಧ ಶತಕ ಸಿಡಿಸಿದ್ದಾರೆ.

ಪ್ರಸ್ತುತ ಕ್ರೀಸ್ನಲ್ಲಿರುವ ಸುರೇಶ್ ರೈನಾ ಮತ್ತು ಭಾರತ ತಂಡದ ಉಪನಾಯಕ ವಿರಾಟ್ ಕೊಹ್ಲಿ ಉತ್ತಮವಾಗಿ ಬ್ಯಾಟ್ ಬಿಸುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ಭಾರತ ಒಟ್ಟು 2 ವಿಕೆಟ್ ನಷ್ಟಕ್ಕೆ 273ರನ್ (45 ಓವರ್ ಗಳು) ಗಳಿಸಿದೆ. ಇನ್ನು ಕ್ರೀಸ್ ನಲ್ಲಿರುವ ಸುರೇಶ್ ರೈನಾ65 ರನ್ (47 ಎಸೆತ) ಮತ್ತು ವಿರಾಟ್ ಕೊಹ್ಲಿ 105 ರನ್ (122 ಎಸೆತ) ಗಳಿಸಿದ್ದಾರೆ.

ಟಾಸ್ ಗೆದ್ದು ಭಾರತ  ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿತು. ನಾಯಕ ಧೋನಿಯ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆಡಿದ ಭಾರತದ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಉತ್ತಮ ಆರಂಭವನ್ನೇ ಒದಗಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.