ಕ್ರೀಡೆ

ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈವೊಲ್ಟೇಜ್ ಪಂದ್ಯ ಹಲವು ದಾಖಲೆಗಳನ್ನು ಮುರಿದಿದ್ದು, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಭಾರತ ತಂಡದ ಉಪನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ..

ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ವೈಖರಿ (ಸಂಗ್ರಹ ಚಿತ್ರ)
Published On :

ಅಡಿಲೇಡ್: ಆಸ್ಟ್ರೇಲಿಯಾದ ಅಡಿಲೇಡ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈವೊಲ್ಟೇಜ್ ಪಂದ್ಯ ಹಲವು ದಾಖಲೆಗಳನ್ನು ಮುರಿದಿದ್ದು, ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಭಾರತ ತಂಡದ ಉಪನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ.

ಈ ವರೆಗಿನ ಎಲ್ಲ ವಿಶ್ವಕಪ್ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿದ್ದ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಒಟ್ಟು 107ರನ್ ಗಳಿಸುವ ಮೂಲಕ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಮೊದಲ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್ ಮನ್ ಎಂಬ ಖ್ಯಾತಿ ಪಡೆದಿದ್ದಾರೆ.

2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿ ವೇಳೆ ಪಾಕಿಸ್ತಾನದ ವಿರುದ್ಧ ಸಚಿನ್ ತೆಂಡೂಲ್ಕರ್ ಅವರು 98 ರನ್ಗಳನ್ನು ಸಿಡಿಸಿ ಔಟ್ ಆಗಿದ್ದರು. ಇದು ಈ ವರೆಗಿನ ಅತ್ಯಧಿಕ ಸ್ಕೋರ್ ಆಗಿತ್ತು. ಆದರೆ ವಿರಾಟ್ ಕೊಹ್ಲಿ ಸಚಿನ್ ದಾಖಲೆಯನ್ನು ಇಂದು ಮುರಿದು ಹಾಕಿದ್ದಾರೆ.

ಇದಲ್ಲದೆ ಈ ಹಿಂದೆ 21 ಶತಕಗಳನ್ನು ಸಿಡಿಸುವ ಮೂಲಕ ಭಾರತ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದ ಕೊಹ್ಲಿ, ಇಂದಿನ ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ 22ನೇ ಶತಕ ಸಿಡಿಸಿದ್ದಾರೆ. ಆಮೂಲಕ ಭಾರತದ ಪರ ಅತ್ಯಧಿಕ ಶತಕಗಳನ್ನು ಸಿಡಿಸಿರುವ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ 22 ಶತಕಗಳನ್ನು ಸಿಡಿಸಿ 2ನೇ ಸ್ಥಾನದಲ್ಲಿದ್ದ ಗಂಗೂಲಿ ಅವರು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 49 ಶತಕಗಳನ್ನು ಸಿಡಿಸಿರುವ ಭಾರತದ ಲೆಜೆಂಡ್ ಬ್ಯಾಟ್ಸ್ ಮನ್ ಸಚಿನ್ ತೆಂಡೂಲ್ಕರ್ ಅವರು ಮೊದಲ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.