ಹರಿಣಗಳ ಸವಾಲಿನ ಬಗ್ಗೆ ಸಚಿನ್ ಎಚ್ಚರಿಕೆ
ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿರುವ ಟೀಂ ಇಂಡಿಯಾಗೆ, ಕ್ರಿಕೆಟ್ ಮಾಂತ್ರಿಕ್ ಸಚಿನ್ ತೆಂಡೂಲ್ಕರ್...

ನವದೆಹಲಿ: ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿರುವ ಟೀಂ ಇಂಡಿಯಾಗೆ, ಕ್ರಿಕೆಟ್ ಮಾಂತ್ರಿಕ್ ಸಚಿನ್ ತೆಂಡೂಲ್ಕರ್ ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಸವಾಲಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಆರಂಭಿಕ ಪಂದ್ಯದಲ್ಲಿ ಭಾರತ, ಪಾಕಿಸ್ತಾನ ವಿರುದ್ಧ ಗೆಲುವು ದಾಖಲಿಸಿದೆ. ಆದರೆ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಹರಿಣಗಳ ಪಡೆ ಪಾಕ್‌ಗಿಂತ ಹೆಚ್ಚು ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ.
ದ.ಆಫ್ರಿಕಾ ತಂಡದ ವಿರುದ್ಧ ಸಿಂಗಲ್ಸ್ ಗಳಿಸುವುದು ಸುಲಭವಲ್ಲ. ಅವರ ಬೌಲಿಂಗ್ ವಿಭಾಗ ಹೆಚ್ಚು ಬಲಿಷ್ಠವಾಗಿದೆ. ಅಲ್ಲದೆ ಚುರುಕಿನ ಕ್ಷೇತ್ರ ರಕ್ಷಣೆ ಹೊಂದಿದೆ. ಒಟ್ಟಿನಲ್ಲಿ ಆಫ್ರಿಕಾ ಎಲ್ಲಾ ವಿಭಾಗದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಬಲಿಷ್ಠವಾಗಿದೆ ಎಂದಿದ್ದಾರೆ.
ದಕ್ಷಿಣ ಆಫ್ರಿಕಾ ತಂಡಕ್ಕೆ ಡೇಲ್ ಸ್ಟೇಯ್ನ್ ಪ್ರಮುಖ ಬೌಲರ್ ಆಗಿದ್ದಾರೆ. ಆತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಸಚಿನ್ ತಿಳಿಸಿದ್ದಾರೆ.
ಇನ್ನು ಆರಂಭಿಕ ರೋಹಿತ್ ಶರ್ಮಾ ಬಗ್ಗೆ ಮಾತನಾಡಿದ ಸಚಿನ್ ತೆಂಡೂಲ್ಕರ್, ರೋಹಿತ್ ಮೇಲೆ ಹೆಚ್ಚಿನ ಒತ್ತಡ ಹೇರಲು ಇಚ್ಛಿಸುವುದಿಲ್ಲ. ಮುಂದಿನ ಪಂದ್ಯಗಳಲ್ಲಿ ಆತ ಉತ್ತಮ ಪ್ರದರ್ಶನ ಮುಂದುವರಿಸಲಿದ್ದಾರೆ. ವಿಶ್ವಕಪ್ ಟ್ರೋಫಿ ಗೆಲ್ಲಲು ಪೂರ್ಣ ತಂಡದ ಪರಿಶ್ರಮ ಅಗತ್ಯವಿದೆ. ಪ್ರತಿಯೊಬ್ಬ ಆಟಗಾರ ಸ್ಥಿರ ಪ್ರದರ್ಶನ ನೀಡಬೇಕು. ಒಂದೆರಡು ಆಟಗಾರರು ಪ್ರದರ್ಶನ ಸಾಲದು ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


