ಕ್ರೀಡೆ

ಟಾಸ್ ಗೆದ್ದ ಭಾರತ: ಬ್ಯಾಟಿಂಗ್ ಆಯ್ಕೆ

ಇಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಸೆಣಸಲಿರುವ ಭಾರತ ಟಾಸ್ ಗೆದಿದ್ದು, ಬ್ಯಾಟಿಂಗ್ ಆಯ್ಕೆ...

ಟಾಸ್ ಗೆದ್ದ ಭಾರತ: ಬ್ಯಾಟಿಂಗ್ ಆಯ್ಕೆ
ಸಾಂದರ್ಭಿಕ ಚಿತ್ರ
Published On :

ಮೆಲ್ಬರ್ನ್: ಇಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಸೆಣಸಲಿರುವ ಭಾರತ ಟಾಸ್ ಗೆದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ವಿಶ್ವಕಪ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಗೆಲವು ಮರೀಚಿಕೆಯಾಗಿಯೇ ಉಳಿದಿದೆ.

1992, 1999 ಮತ್ತು 2011 ಈ ಮೂರೂ ವಿಶ್ವಕಪ್‌ಗಳಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಿದ್ದ ಭಾರತಕ್ಕೆ ಸೋಲೇ ಗತಿಯಾಗಿತ್ತು. ಆದರೆ, ಈ ಬಾರಿಯ ವಿಶ್ವಕಪ್‌ನಲ್ಲಿ ಇತಿಹಾಸ ಬದಲಿಸುವುದೇ ಭಾರತ?

ಬಿ ಗುಂಪಿನ ತನ್ನ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸುಲಭ ಜಯಗಳಿಸಿ ಬಂದಿರುವ ಮಹೇಂದ್ರ ಸಿಂಗ್ ಧೋನಿ ಪಡೆಗೆ ಈ ಫಲಿತಾಂಶ ಹೆಚ್ಚು ಆತ್ಮವಿಶ್ವಾಸ ತುಂಬವಂತೆ ಮಾಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾವನ್ನು ಮಣಿಸಿ ಇತಿಹಾಸ ಬರೆಯಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಹುಟ್ಟಲು ಕಾರಣವಾಗಿದೆ. ವಿಶ್ವಕಪ್‌ನಲ್ಲಿ ಈವರೆಗೂ ಹುಟ್ಟಲು ಕಾರಣವಾಗಿದೆ. ವಿಶ್ವಕಪ್‌ನಲ್ಲಿ ಈವರೆಗೂ ದಕ್ಷಿಣ ಆಫ್ರಿಕಾ ವಿರುದ್ಧ ಆಡಿರುವ ಮೂರೂ ಪಂದ್ಯಗಳಲ್ಲಿ ಭಾರತವೇ ಮೊದಲು ಬ್ಯಾಟ್ ಮಾಡಿತ್ತು.

ಹಾಗಾಗಿ, ಭಾನುವಾರ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಕದನದಲ್ಲಿ ಯಾರು ಗೆಲ್ಲುತ್ತಾರೋ ಅವರೇ, ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆಯಬಲ್ಲರು ಎಂಬ ಊಹೆ ಇದೆ. ಉಭಯ ಪಡೆಗಳ ವಿಶ್ಲೇಷಣೆ ಮಾಡಿದಲ್ಲಿ ಭಾರತದ ಯುವ ಪಡೆಯ ಮುಂದೆ ದಕ್ಷಿಣ ಆಫ್ರಿಕಾವೇ ಫೇವರಿಟ್ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.