ಕಿವೀಸ್ ಸರಣಿ ಕ್ಲೀನ್ ಸ್ವೀಪ್

ವೆಲ್ಲಿಂಗ್ಟನ್: ಪ್ರವಾಸಿ ಶ್ರೀಲಂಕನ್ನರು ಎರಡನೇ ಇನಿಂಗ್ಸ್‌ನಲ್ಲಿ ನಾಟಕೀಯ ಕುಸಿತ ಕಾಣುವುದರೊಂದಿಗೆ ಎರಡನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ದಯನೀಯ ಸೋಲು ಕಂಡಿದ್ದಾರೆ.
ಬಾಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರರು ಇನಿಂಗ್ಸ್ ಮತ್ತು 193 ರನ್‌ಗಳ ಭಾರಿ ಅಂತರದಲ್ಲಿ ಶ್ರೀಲಂಕಾ ಎದುರು ಜಯಭೇರಿ ಬಾರಿಸುವುದರೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದ್ದಾರೆ. ಗೆಲ್ಲಲು ಎರಡನೇ ಇನಿಂಗ್ಸ್‌ನಲ್ಲಿ 390 ರನ್‌ಗಳ ಗುರಿ ತಲುಪಬೇಕಿದ್ದ ಶ್ರೀಲಂಕಾ ಪಡೆಗೆ 196 ರನ್‌ಗಳಿಸಲಷ್ಟೇ ಸಾಧ್ಯವಾಯಿತು. ಲಹಿರು ತಿರಿಮಾನೆ ಮತ್ತು ಕೌಶಾಲ್ ಸಿಲ್ವಾ ಅರ್ಧಶತಕ ಬಿಟ್ಟರೆ, ಇತರೆ ಬ್ಯಾಟ್ಸ್‌ಮನ್‌ಗಳು ದಯನೀಯ ವೈಫಲ್ಯ ಅನುಭವಿಸುವುದರೊಂದಿಗೆ ಲಂಕಾ ತಂಡ ಸುಲಭವಾಗಿಯೇ ಪಂದ್ಯವನ್ನು ಕೈಚೆಲ್ಲಿತು.
ಶ್ರೀಲಂಕನ್ನರು ಮೊದಲ ಇನಿಂಗ್ಸ್‌ನಲ್ಲಿ 135 ರನ್‌ಗಳ ಮುನ್ನಡೆ ಸಾಧಿಸಿದ್ದರೂ ಸಹ ಎರಡನೇ ಇನಿಂಗ್ಸ್ ಬ್ಯಾಟಿಂಗ್‌ನಲ್ಲಿ ನ್ಯೂಜಿಲೆಂಡ್ ದಾಂಡಿಗರು ಅಬ್ಬರಿಸಿದ ರೀತಿ ಪ್ರವಾಸಿಗರನ್ನು ಬೆಚ್ಚಿಬೀಳಿಸಿತು. ಆಸ್ಟ್ರೇಲಿಯಾದ ಎರಡನೇ ಇನಿಂಗ್ಸ್‌ನಲ್ಲಿ ದ್ವಿಶತಕ ಗಳಿಸಿದ್ದ ಕೇನ್ ವಿಲಿಯಮ್ಸನ್ ಪಂದ್ಯಶ್ರೇಷ್ಠ ಗೌರವ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


