ಏಕದಿನ ರ್ಯಾಂಕಿಂಗ್: ಕೊಹ್ಲಿಗೆ 2ನೇ ಸ್ಥಾನ
ಭಾರತದ ಮಧ್ಯಮ ಕ್ರಮಾಂಕದ...

ದುಬೈ: ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನೂತನ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದ ಗೌರವ ಪಡೆದಿದ್ದಾರೆ. ಜೊತೆಗೆ, ಶಿಖರ್ ಧವನ್ ಮತ್ತು ಮಹೇಂದ್ರ ಸಿಂಗ್ ಧೋನಿ ಕೂಡ ಅಗ್ರ 10ರೊಳಗೆ ಸ್ಥಾನ ಪಡೆದಿರುವ ಮತ್ತಿಬ್ಬರು ಆಟಗಾರರಾಗಿದ್ದಾರೆ.
ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮುನ್ನಡೆಸಿರುವ ಕೊಹ್ಲಿ, ಒಟ್ಟು 862 ಅಂಕಗಳನ್ನು ಸಂಪಾದಿಸಿದ್ದಾರೆ. ಅವರು, ಬ್ಯಾಟಿಂಗ್ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್‌ಗಿಂತ ಕೇವಲ 25 ಅಂಕಗಳ ಹಿನ್ನೆಡೆಯಲ್ಲಿದ್ದಾರೆ.
ಇನ್ನು ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ದಯನೀಯ ವೈಫಲ್ಯ ಅನುಭವಿಸಿರುವ ಆರಂಭಿಕ ಧವನ್, 5ನೇ ಕ್ರಮಾಂಕದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ 10ನೇ ಕ್ರಮಾಂಕದ ಗೌರವ ಪಡೆದಿದ್ದಾರೆ. ಬೌಲರ್‌ಗಳ ವಿಭಾಗದಲ್ಲಿ ಭಾರತದ ಪರ ಮಾಧ್ಯಮ ವೇಗಿ ಭುವನೇಶ್ವರಕುಮಾರ್ ಮತ್ತು ಸ್ಪಿನ್ನರ್ ರವೀಂದ್ರ ಜಡೇಜಾ ಕ್ರಮವಾಗಿ 8ನೇ ಮತ್ತು 9ನೇ ರ್ಯಾಂಕಿಂಗ್‌ನಲ್ಲಿದ್ದಾರೆ. ವೆಸ್ಟ್ ಇಂಡೀಸ್ ಸ್ಪಿನ್ನರ್ ಸುನೀಲ್ ನಾರಾಯಣ್ ಮೊದಲ ಸ್ಥಾನ ಹೊಂದಿದ್ದಾರೆ.
ಪಾಕಿಸ್ತಾನದ ಸಯೀದ್ ಅಜ್ಮಲ್ ಮತ್ತು ದಕ್ಷಿಣ ಆಫ್ರಿಕಾದ ಡೇಲ್‌ಸ್ಟೇಯ್ನ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ಪರ ಜಡೇಜಾ 6ನೇ ಕ್ರಮಾಂಕದಲ್ಲಿರುವುದೇ ಉತ್ತಮ ಸಾಧನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


