ಧ್ಯಾನ್‌ಚಂದ್‌ಗೆ ಮೊದಲು ಭಾರತರತ್ನ ಕೊಡಬೇಕಿತ್ತು: ಮಿಲ್ಕಾಸಿಂಗ್
ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ...

ನವದೆಹಲಿ: ಹಾಕಿ ದಂತ ಕಥೆ ಧ್ಯಾನ್ ಚಂದ್ ಅವರಿಗೆ ಮೊದಲು ಭಾರತರತ್ನ ಪ್ರಶಸ್ತಿ ನೀಡಬೇಕಿತ್ತು ಎಂದು ಖ್ಯಾತ ಅಥ್ಲೀಟ್ ಮಿಲ್ಕಾ ಸಿಂಗ್ ಹೇಳಿದ್ದಾರೆ.
ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ಕ್ರೀಡಾಳುಗಳ ಪೈಕಿ ಮೊದಲು ಧ್ಯಾನ್ ಚಂದ್ ಅವರಿಗೇ ನೀಡಬೇಕಿತ್ತು. ಈ ಗೌರವಕ್ಕೆ ಅವರೇ ಅರ್ಹ ವ್ಯಕ್ತಿ ಎಂದು ಮಿಲ್ಕಾ ಸಿಂಗ್ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ 'ಫ್ಲೈಯಿಂಗ್ ಸಿಖ್ ' ಎಂದೇ ಖ್ಯಾತರಾಗಿರುವ ಮಿಲ್ಕಾ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್‌ಗೆ ಈ ಪ್ರಶಸ್ತಿಯನ್ನು ನೀಡುವ ಮೂಲಕ ಇನ್ನಿತರ ಕ್ರೀಡಾಪಟುಗಳಿಗೂ ಪ್ರಶಸ್ತಿ ನೀಡಿ ಗೌರವಿಸಲಿರುವ ಅವಕಾಶ ದಕ್ಕಿದಂತಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


