ರೊನಾಲ್ಡೊಗೆ ಬ್ಯಾಲನ್ ಡಿಒರ್ ಪ್ರಶಸ್ತಿ
ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಅವರು 2014ನೇ ಸಾಲಿನ ಫಿಫಾ ಬ್ಯಾಲನ್ ಡಿಒರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜ್ಯುರಿಚ್: ವಿಶ್ವದ ಖ್ಯಾತ ಫುಟ್‌ಬಾಲ್ ಆಟಗಾರ ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಅವರು 2014ನೇ ಸಾಲಿನ ಫಿಫಾ ಬ್ಯಾಲನ್ ಡಿಒರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೋಮವಾರ ರೊನಾಲ್ಡೋ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮೂರನೇ ಬಾರಿಗೆ ಈ ಗೌರವ ಸಾಧನೆ ಮಾಡಿದ್ದಾರೆ. ಮತದಾನದ ಮೂಲಕ ವಿಶ್ವದ ಅತ್ಯುತ್ತಮ ಫುಟ್‌ಬಾಲ್ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ರೊನಾಲ್ಡೋ, ಖ್ಯಾತ ಪುಟ್ಬಾಲಿಗ ಲಿಯೋನಲ್ ಮೆಸ್ಸಿ ಅವರಿಗಿಂತ ದುಪ್ಪಟ್ಟು ಮತ ಪಡೆಯುವ ಮೂಲಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇನ್ನು ಎರಡನೇ ಸ್ಥಾನದಲ್ಲಿ ಅರ್ಜೆಂಟೀನಾದ ಲಿಯೋನಲ್ ಮೆಸ್ಸಿ ಹಾಗೂ ಮೂರನೇ ಸ್ಥಾನದಲ್ಲಿ ಜರ್ಮನಿಯ ಪ್ರತಿಭಾನ್ವಿತ ಗೋಲ್‌ಕೀಪರ್ ಮ್ಯಾನುಯೆಲ್ ನೂಯೆರ್ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ರೊನಾಲ್ಡೋ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಜಾಗತಿಕ ಫುಟ್ಬಾಲ್‌ನಲ್ಲಿ ಹೆಚ್ಚು ಗಮನ ಸೆಳೆದಿರುವ ಅಟಾಗರರಾಗಿದ್ದಾರೆ. ಸತತ ಮೂರು ಬಾರಿ ಈ ಪ್ರಶಸ್ತಿ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿರುವ ರೊನಾಲ್ಡೊ ಹಾಗೂ ಫ್ರಾನ್ಸ್‌ನ ಜಿನೆಡಿನ್ ಜಿಡಾನ್ ಅವರೊಂದಿಗೆ ಸಮಬಲ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


