ಕ್ರಿಕೆಟ್ ವಿಶ್ವಕಪ್: ಕುತೂಹಲದ ಕದನವಾಗಲಿದೆ ಭಾರತ-ಪಾಕ್ ಪಂದ್ಯ
2015ರ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯವನ್ನು ಹೆಚ್ಚಿನ ಜನರು...

ನವದೆಹಲಿ: 2015ರ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯವನ್ನು ಹೆಚ್ಚಿನ ಜನರು ವೀಕ್ಷಿಸಲಿದ್ದು, ಇದು ಅತೀ ಹೆಚ್ಚು ಜನರು ವೀಕ್ಷಿಸಿದ ಪಂದ್ಯ ಎಂದು ದಾಖಲೆ ಸೃಷ್ಟಿಸಲಿದೆ. ಹೀಗಂತ ವಿಶ್ವಕಪ್‌ನ ಅಧಿಕಾರಿಗಳೇ ಭವಿಷ್ಯ ನುಡಿದಿದ್ದಾರೆ.
2011ರ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಪಂದ್ಯ ಭಾರತ ಮತ್ತು ಪಾಕ್ ನಡುವೆ ನಡೆದಿತ್ತು. ಆವಾಗ ಪ್ರಸ್ತುತ ಪಂದ್ಯವನ್ನು ವೀಕ್ಷಿಸಿದವರ ಸಂಖ್ಯೆ 988 ಮಿಲಿಯನ್ ಗಿಂತಲೂ ಹೆಚ್ಚಾಗಿತ್ತು. ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕ್ ನಡುವಿನ ಪಂದ್ಯವನ್ನು ಅತೀ ಹೆಚ್ಚು ಜನ ವೀಕ್ಷಿಸಲಿದ್ದು, ಇದು ಆಸ್ಟ್ರೇಲಿಯಾದಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂಬುದು ವಿಶ್ವಕಪ್‌ನ ಅಧಿಕಾರಿಗಳ ಅಂಬೋಣ.
ಫೆಬ್ರವರಿ 15ರಂದು ಭಾರತ ಮತ್ತು ಪಾಕ್ ನಡುವಿನ ಪಂದ್ಯ ನಡೆಯಲಿದ್ದು, ಹಾಲಿ ಚಾಂಪಿಯನ್ ಟೀಂ ಇಂಡಿಯಾ ಯಾವ ರೀತಿ ಪಾಕ್‌ಗೆ ಪೈಪೋಟಿ ನೀಡಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


