ಕ್ರೀಡೆ

ಟೀಂ ಇಂಡಿಯಾ ಆಟಗಾರರಿಗೆ ಹೊಸ ಜೆರ್ಸಿ

ಹೊಸ ಜೆರ್ಸಿಯನ್ನು ಮೆಲ್ಬೊರ್ನ್ ಕ್ರಿಕೆಟ್...

ಟೀಂ ಇಂಡಿಯಾ ಆಟಗಾರರಿಗೆ ಹೊಸ ಜೆರ್ಸಿ
ಹೊಸ ಜೆರ್ಸಿಯಲ್ಲಿ ಟೀಂ ಇಂಡಿಯಾ
Published On :

ನವದೆಹಲಿ: ಟೀಂ ಇಂಡಿಯಾ ಆಟಗಾರರಿಗೆ ಹೊಸ ಜೆರ್ಸಿಯನ್ನು ಮೆಲ್ಬೊರ್ನ್ ಕ್ರಿಕೆಟ್ ಮೈದಾನದಲ್ಲಿ ಬಿಸಿಸಿಐ ಅನಾವರಣಗೊಳಿಸಿದೆ. ಈ ಜೆರ್ಸಿಯನ್ನು ಮುಂಬರುವ ತ್ರಿಕೋನ ಸರಣಿ ಮತ್ತು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಧೋನಿ ಬಾಯ್ಸ್ ಧರಿಸಲಿದ್ದಾರೆ.

ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಅಕೌಂಟ್‌ನಲ್ಲಿ ಟೀಂ ಇಂಡಿಯಾ ಸದಸ್ಯರ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ಈ ಹೊಚ್ಚ ಹೊಸ ಜೆರ್ಸಿಯನ್ನು ಪಾಲಿಸ್ಟರ್‌ನಿಂದ ತಯಾರಿಸಲಾಗಿದೆ. ಸಣ್ಣ ಪುಟ್ಟ ಮಾರ್ಪಾಡುಗಳೊಂದಿಗೆ ತಯಾರಾಗಿರುವ ಈ ಜೆರ್ಸಿಯನ್ನು ತ್ರಿಕೋನ ಸರಣಿ ಮತ್ತು ಫೆಬ್ರವರಿಯಲ್ಲಿ ಆರಂಭವಾಗುವ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಆಟಗಾರರು ತೊಡಲಿದ್ದಾರೆ.

ಇದೇ ತಿಂಗಳ 16ರಿಂದ ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ ತ್ರಿಕೋನ ಸರಣಿಯ ಆರಂಭಗೊಳ್ಳಲಿದೆ. ವಿಶ್ವಕಪ್‌ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ ಮೂಲಕ ಅಭಿಯಾನ ಪ್ರಾರಂಭಗೊಳ್ಳಲಿದೆ.







Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.