ಕ್ರೀಡೆ

ಕೇವಲ 31 ಎಸೆತದಲ್ಲೇ ಶತಕ..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಅವರು ಕ್ರಿಕೆಟ್ ಇತಿಹಾಸದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಕೇವಲ 31 ಎಸೆತದಲ್ಲೇ ಶತಕ..!
ದಾಖಲೆ ಶತಕ ಸಿಡಿಸಿ ಎಬಿ ಡಿವಿಲಿಯರ್ಸ್ ಆಟದ ವೈಖರಿ (ಸಂಗ್ರಹ ಚಿತ್ರ)
Published On :

ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಅವರು ಕ್ರಿಕೆಟ್ ಇತಿಹಾಸದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಜೋಹಾನ್ಸ್‌ಬರ್ಗ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಡಿವಿಲಿಯರ್ಸ್ ಕೇವಲ 31 ಎಸೆತಗಳಲ್ಲಿ ಶತಕ ಸಿಡಿಸುವುದರ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಅತಿವೇಗದ ಶತಕ ಸಿಡಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್ ತಂಡದ ಕೋರಿ ಆ್ಯಂಡರ್‌ಸನ್ ಅವರ ದಾಖಲೆಯನ್ನು ಡಿವಿಲಿಯರ್ಸ್ ಹಿಂದಕ್ಕೆ ಹಾಕಿದ್ದಾರೆ.

ಈ ಪಂದ್ಯದಲ್ಲಿ ಕೇವಲ 44 ಎಸೆತಗಳನ್ನು ಎದುರಿಸಿದ ಡಿವಿಲಿಯರ್ಸ್ ಬರೋಬ್ಬರಿ 149 ರನ್ ಸಿಡಿಸಿದರು. ನಿಗದಿತ 50 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ಕೇವಲ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 439ರನ್‌ಗಳನ್ನು ಪೇರಿಸಿದೆ. ಈ ಪೈಕಿ ಡಿವಿಲಿರ್ಯಸ್ (149 ರನ್), ಆಮ್ಲಾ (153 ರನ್) ಮತ್ತು ರಾಸ್ಸೋವ್ (128ರನ್) ಭರ್ಜರಿ ಶತಕಗಳನ್ನು ಸಿಡಿಸಿದ್ದಾರೆ. ಡಿವಿಲಿಯರ್ಸ್ ಅವರ ದಾಖಲೆ ಶತಕದಲ್ಲಿ ಒಟ್ಟು 8 ಬೌಂಡರಿ ಮತ್ತು 16 ಸಿಕ್ಸರ್‌ಗಳು ಒಳಗೊಂಡಿವೆ.

ಈ ಹಿಂದೆ ಇದೇ ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಕೋರಿ ಆ್ಯಂಡರ್ ಸನ್ ಅವರು 36 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಈವರೆಗಿನ ಅತಿ ವೇಗದ ಶತಕ ಎಂದು ದಾಖಲಾಗಿತ್ತು. ಇದೀಗ ಡಿವಿಲಿಯರ್ಸ್ ಈ ದಾಖಲೆಯನ್ನು ಮುರಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.