ಕ್ರೀಡೆ

ವಿದೇಶ ಪ್ರವಾಸದಿಂದ ಬೌಲರ್‌ಗಳು ಏನೂ ಕಲಿತಿಲ್ಲ: ಗವಾಸ್ಕರ್

ವಿಶ್ವಕಪ್ ಪಂದ್ಯಾಟ ಸನ್ನಿಹಿತವಾಗುತ್ತಿದ್ದರೂ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತೀಯ ಬೌಲರ್‌ಗಳ ಕಳಪೆ ಪ್ರದರ್ಶನದ...

ವಿದೇಶ ಪ್ರವಾಸದಿಂದ ಬೌಲರ್‌ಗಳು ಏನೂ ಕಲಿತಿಲ್ಲ: ಗವಾಸ್ಕರ್
ಸುನೀಲ್ ಗವಾಸ್ಕರ್
Published On :

ಬ್ರಿಸ್ಬೇನ್: ವಿಶ್ವಕಪ್ ಪಂದ್ಯಾಟ ಸನ್ನಿಹಿತವಾಗುತ್ತಿದ್ದರೂ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತೀಯ ಬೌಲರ್‌ಗಳ ಕಳಪೆ ಪ್ರದರ್ಶನದ ಬಗ್ಗೆ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅಸಮಧಾನ ವ್ಯಕ್ತ ಪಡಿಸಿದ್ದಾರೆ.

ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 2-0 ಅಂತರದಲ್ಲಿ ಟೀಂ ಇಂಡಿಯಾ ಪರಾಭವಗೊಂಡಿದೆ. ಈ ಪಂದ್ಯಗಳಲ್ಲಿ 20 ವಿಕೆಟ್ ಪಡೆಯಲು ನಮ್ಮ ಬೌಲರ್‌ಗಳು ವಿಫಲರಾಗಿದ್ದಾರೆ. ಆದಾಗ್ಯೂ, ತ್ರಿಕೋನ ಸರಣಿಯಲ್ಲಿ 267 ರನ್‌ಗಳ ಗುರಿ ಮುಟ್ಟುವಲ್ಲಿಯೂ ನಾವು ಎಡವಿದ್ದೇವೆ ಎಂದು ತಂಡದ ಪ್ರದರ್ಶನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇಷ್ಟೊಂದು ಪಂದ್ಯಗಳನ್ನಾಡಿಯೂ ವಿದೇಶ ಪ್ರವಾಸದಿಂದ ನಮ್ಮ ಬೌಲರ್‌ಗಳು ಏನೂ ಕಲಿತಿಲ್ಲ. ಇದು ಚಿಂತೆಗೀಡು ಮಾಡಿದೆ. ವಿಶ್ವಕಪ್ ಸಮೀಪಿಸುತ್ತಿದೆ. ಹಾಲಿ ಚಾಂಪಿಯನ್‌ಗಳಾಗಿರುವ ನಾವು ಉತ್ತಮ ಪ್ರದರ್ಶನ ನೀಡಬೇಕಾಗಿದೆ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗವಾಸ್ಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.