ವಿಶ್ವಕಪ್ ಕ್ರಿಕೆಟ್ ಆಟಗಾರನಿಗೆ ಬ್ಲಾಕ್ ಮೇಲ್: ಆರೋಪಿ ಬಂಧನ
ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿರುವ ಬಗ್ಗೆ ಮಾಧ್ಯಮಗಳ ಮುಂದೆ...

ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿರುವ ಬಗ್ಗೆ ಮಾಧ್ಯಮಗಳ ಮುಂದೆ ಬಹಿರಂಗಗೊಳಿಸಬಾರದೆಂದರೆ ಕೇಳಿದಷ್ಟು ಹಣ ನೀಡಬೇಕು ಎಂದು ವಿಶ್ವಕಪ್ ಕ್ರಿಕೆಟ್ ಆಟಗಾರನಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ವರದಿಯಾಗಿದೆ.
ವಿಶ್ವಕಪ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಆಟವಾಡುತ್ತಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಅವರು ಐದು ವರ್ಷಗಳ ಹಿಂದೆ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದರೆಂಬ ಕಾರಣಕ್ಕೆ ಅವರನ್ನು ಆಸ್ಟ್ರೇಲಿಯಾ ವ್ಯಕ್ತಿಯೊಬ್ಬ ಬ್ಲಾಕ್ ಮೇಲೆ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಕ್ರಿಕೆಟಿಗೆ ಇಯಾನ್ ಅವರು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನೆನ್ನಲಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ, ಇಯಾನ್‌ಗೆ ಆ ವ್ಯಕ್ತಿ ಈಮೇಲ್ ಕಳುಹಿಸಿದ್ದಾನೆ. ಈ ಸಂಬಂಧವನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಬಹಿರಂಗಪಡಿಸಬಾರದೆಂದರೆ ಐದಂಕಿ ಮೊತ್ತದ ಹಣ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದನು.
ಇಯಾನ್ ಅವರು ಈ ವಿಷಯವನ್ನು ತಂಡದ ಮ್ಯಾನೇಜರ್ ಅವರಿಗೆ ತಿಳಿಸಿ, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಬ್ಲಾಕ್ ಮೇಲ್ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


