ಮಹಿಳಾ ಕ್ರೀಡೆಗೆ ಸಿಗದ ಪ್ರೋತ್ಸಾಹ: ಸೈನಾ
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ವಿಂಬಲ್ಡನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯ ವನಿತೆಯರ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ...

ಹೈದರಾಬಾದ್: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ವಿಂಬಲ್ಡನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯ ವನಿತೆಯರ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಆದರೆ, ಕ್ರೀಡೆಯಲ್ಲಿ ಭಾರತದ ಮಹಿಳೆಯರು ಇನ್ನಷ್ಟು ಮಿಂಚಲು ಅವರಿಗೆ ಸರಿಯಾದ ಪೋತ್ಸಾಹ ಸಿಗಬೇಕಿದೆಎಂದು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಸಾನಿಯಾ ಮಿರ್ಜಾ, ದೀಪಿಕಾ ಪಳ್ಳಿಕಲ್, ಜ್ವಾಲಾಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ತಮ್ಮ ಮಹತ್ವದ ಸಾಧನೆ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಈ ಎಲ್ಲಾ ಸಾಧನೆಗಳ ನಡುವೆ ಭಾರತೀಯ ಮಹಿಳೆಯರಲ್ಲಿ ಕ್ರೀಡೆಯಲ್ಲಿನ ಆಸಕ್ತಿ ಕಡಿಮೆ ಇದ್ದು, ಇದರ ಬಗ್ಗೆ ಭಾರತೀಯ ಮಹಿಳೆಯರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಸೈನಾ ಪ್ರತಿಪಾದಿಸಿದ್ದಾರೆ.
ಪ್ರಸ್ತುತ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಆದರೆ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ಬೇಕಿದೆ. ಸಾಂಪ್ರದಾಯಿಕವಾಗಿ ಮಹಿಳೆಯರು ಕ್ರೀಡೆಯಲ್ಲಿ ತೊಡಗಲು ಅವಕಾಶ ನೀಡುವುದಿಲ್ಲ. ಮಹಿಳೆಯರು ಕೇವಲ ಓದಿನಲ್ಲಿ ಮುಂದೆ ಬಂದು ತಮಗೆ ಸೂಕ್ತವಾದ ವೃತ್ತಿ ಕ್ಷೇತ್ರದಲ್ಲಿ ತೊಡಗುವಂತೆ ಆಲೋಚಿಸುತ್ತಾರೆ. ಇನ್ನು ಎರಡು ಹಾಗೂ ಮೂರನೇ ಮಟ್ಟದ ನಗರ ಪ್ರದೇಶಗಳಲ್ಲಿ ಮಹಿಳೆಯರು ಕ್ರೀಡೆಯಲ್ಲಿ ಭಾಗವಹಿಸಿದರೂ ಅವರಿಗೆ ಹೆಚ್ಚು ಅವಕಾಶಗಳಿಲ್ಲ. ಈ ಪರಿಸ್ಥಿತಿ ಬದಲಾದರೆ ವಿಶ್ವ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಮಹಿಳಾ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಬಹುದು ಎಂದು ಸೈನಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


