ಒಳ್ಳೆಯ ಆಟಗಾರರಿಗೆ ಪೆಟ್ಟು: ರಾಹುಲ್
ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ..

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ ಒಳ್ಳೆಯ ಆಟಗಾರರನ್ನು ಬಾಧಿಸಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಪ್ರಧಾನ ಸಲಹೆಗಾರ ರಾಹುಲ್ ದ್ರಾವಿಡ್ ತಿಳಿಸಿದ್ದಾರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾ. ಆರ್.ಎಂ. ಲೋಧಾ ನೇತೃತ್ವದ ಸಮಿತಿ, ಹಗರಣದಲ್ಲಿ ಭಾಗಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡವನ್ನು ಮುಂದಿನ ಎರಡು ಐಪಿಎಲ್ ಆವೃತ್ತಿಗಳಿಂದ ನಿಷೇಧಿಸಿ ಮಂಗಳವಾರ ತೀರ್ಪು ಪ್ರಕಟಿಸಿತ್ತು.
ಇದಾಗಿ, ಎರಡು ದಿನಗಳ ನಂತರ ಈ ಬಗ್ಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ``ಸುಪ್ರೀಂ ಕೋರ್ಟ್‍ನ ತೀರ್ಪು ನನಗೆ ನಿರಾಸೆ ತಂದಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ'' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


