ಟಿ-20: ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ 10 ರನ್ ಗಳ ಹೀನಾಯ ಸೋಲು
ಜಿಂಬಾಬ್ವೆ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ 10 ರನ್ ಗಳ ಹೀನಾಯ ಸೋಲು ಅನುಭವಿಸಿದೆ...

ಹರಾರೆ: ಜಿಂಬಾಬ್ವೆ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ 10 ರನ್ ಗಳ ಹೀನಾಯ ಸೋಲು ಅನುಭವಿಸಿದೆ.
ಹರಾರೆ ಸ್ಪೋಟ್ಸ್ ಕ್ಲಬ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬ್ಯಾಟಿಂಗ್ ಮಾಡಿಕೊಂಡು 145 ರನ್ ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಉತ್ತಮ ಬ್ಯಾಟಿಂಗ್ ಮಾಡಿದ ಚಿಭಾಬ 51 ಎಸೆತಗಳಲ್ಲಿ 67 ರನ್ ಸಿಡಿಸುವ ಮೂಲಕ ತಂಡದ ಉತ್ತಮ ಮೊತ್ತ ಕಾರಣರಾದರು.
146 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ರಾಬಿನ್ ಉತ್ತಪ್ಪ 42 ರನ್ ಗಳಿಸಿದ್ದು ಬಿಟ್ಟರೆ ಮತ್ಯಾರು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಸ್ಟುವರ್ಟ್ ಬಿನ್ನಿ 23 ರನ್ ಗಳಿಸಿ ಉತ್ತಪ್ಪಗೆ ಸಾಥ್ ನೀಡಿದ್ದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್ ಗಳಿಸಲಷ್ಟೇ ಶಕ್ತವಾಯಿತು.
ಎರಡು ಟ್ವಿ20 ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿ ಸಮ ಮಾಡಿಕೊಂಡವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


