ಕ್ರೀಡೆ

ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ

ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ದಾಳಿ ನಡೆಸಿದ ಪಾಕಿಸ್ತಾನ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಂಪಾದಿಸಿದೆ.

ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ
ಪಾಕಿಸ್ತಾನ
Published On :

ಕೊಲಂಬೋ: ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ದಾಳಿ ನಡೆಸಿದ ಪಾಕಿಸ್ತಾನ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಂಪಾದಿಸಿದೆ.

ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ 135 ರಂ ಗಳ ಬೃಹತ್ ಗೆಲುವು ತನ್ನದಾಗಿಸಿಕೊಂಡಿತು. ಈ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ 2 -1 ಅಂತರದ ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪ್ರವಾಸಿ ಪಾಕ್ 50 ಓವರ್ ಗಳಲ್ಲಿ 4 ವಿಕೆಟ್ ಗೆ 316 ರನ್ ಸಂಪಾದಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ 41 .1 ಓವರ್ ಗಳಲ್ಲಿ 181 ರನ್ ಗಳಿಗೆ ಅಲೌಟ್ ಆಗುವ ಮೂಲಕ ಸೋಲನುಭವಿಸಿತು.

ಸಂಘಟಿತ ಪ್ರದರ್ಶನ ನೀಡಿದ ಪಾಕಿಸ್ತಾನ ಬ್ಯಾಟ್ಸ್ ಮ್ಯಾನ್ ಗಳು ತಂಡ ಬೃಹತ್ ಮೊತ್ತ ಪೇರಿಸಲು ನೆರವಾದರು. ಸರ್ಫರಾಜ್ ಅಹ್ಮದ್(77 ) ಮೊಹಮದ್ ಹಫೀಜ್(54 ) ಅಜರ್ ಅಲಿ(49 ) ಅಹ್ಮದ್ ಶೆಜಾದ್(44 ) ಉತ್ತಮ ಪ್ರದರ್ಶನ ನೀಡಿದರು. ಶ್ರೀಲಂಕಾ ತಂಡದ ಪರ ಮಾಲಿಗಾ ಹಾಗೂ ಪತಿರಣ ತಲಾ 1 ವಿಕೆಟ್ ಪಡೆದರು. ಈ ಮೊತ್ತ್ತ ಬೆನ್ನಟ್ಟಿದ ಲಂಕಾ ಪರ ತರಿಮಾನೆ(56 ) ಅರ್ಧಶತಕ ಹೊರತಾಗಿ ಇತರೆ ಯಾವುದೇ ಬ್ಯಾಟ್ಸ್ ಮ್ಯಾನ್ ಇತ್ತಮ ಪ್ರದರ್ಶನ ನೀಡಲಿಲ್ಲ. ಪಾಕ್ ಪರ ಯಾಸಿರ್ ಷಾ 4 ವಾಸಿಂ 2 ರಹಾತ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.