ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: 4 ವರ್ಷಗಳ ನಂತರ ತಂಡಕ್ಕೆ ಮರಳಿದ ಅಮಿತ್ ಮಿಶ್ರಾ
ಶ್ರೀಲಂಕಾ ವಿರುದ್ಧದ 3 -ಟೆಸ್ಟ್ ಸರಣಿಗೆ ವಿರಾಟ್ ಕೋಹ್ಲಿ ಭಾರತ ತಂಡ ಪ್ರಕಟವಾಗಿದ್ದು ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ 4 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ.

ನವದೆಹಲಿ: ಆಗಸ್ಟ್ ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 3 -ಟೆಸ್ಟ್ ಸರಣಿಗೆ ವಿರಾಟ್ ಕೋಹ್ಲಿ ಭಾರತ ತಂಡ ಪ್ರಕಟವಾಗಿದ್ದು ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ 4 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ.
ತಂಡದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದರೆ, ಮೂರನೇ ಸ್ಪಿನ್ನರ್ ಆಗಿ ಕರ್ನಾಟಕದ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತದ ಎ ತಂಡ ಹಾಗೂ ಆಸ್ಟ್ರೇಲಿಯಾದ ಎ ತಂಡದ ನಡುವೆ ಟೆಸ್ಟ್ ಪಂದ್ಯವನ್ನು ಆಯೋಜಿಸಬೇಕೆಂದು ವಿರಾಟ್ ಕೊಹ್ಲಿ ಮನವಿ ಮಾಡಿರುವುದಾಗಿ ಆಯ್ಕೆ ಸಮಿತಿ ಸದಸ್ಯರು ಹೇಳಿದ್ದಾರೆ.
ಮೂರನೇ ಸ್ಪಿನ್ನರ್ ನ ಆಯ್ಕೆಮಾಡುವುದು ಸಮಿತಿಗೆ ಸವಾಲಿನ ಕೆಲಸವಾಗಿತ್ತು. ಎಡಗೈ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ, ಕರಣ್ ಶರ್ಮಾ ಹಾಗೂ ಕರ್ನಾಟಕದ ಶ್ರೇಯಸ್ ಗೋಪಾಲ್ ಪೈಕಿ ಯಾರನ್ನು ಲಂಕಾ ಪ್ರವಾಸಕ್ಕೆ ಆರಿಸಬೇಕೆಂಬುದು ಆಯ್ಕೆ ಸಮಿತಿಯ ಮುಂದಿರುವ ದೊಡ್ಡ ಸವಾಲಾಗಿತ್ತು. ಈ ಪೈಕಿ ಅಂತಿಮವಾಗಿ ಅಮಿತ್ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ, ಮುರುಳಿ ವಿಜಯ್, ಶಿಖರ್ ಧವನ್, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಚೆತೇಶ್ವರ ಪೂಜಾರ, ವೃದ್ಧಿಮಾನ್ ಷಾ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಹರ್ಭಜನ್ ಸಿಂಗ್, ಕೆ.ಎಲ್ ರಾಹುಲ್, ಅಮಿತ್ ಮಿಶ್ರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


