ಪ್ರೊ ಕಬಡ್ಡಿ: ಪಾಟ್ನಾ ಪೈರೆಟ್ಸ್ ವಿರುದ್ಧ ಬೆಂಗಳೂರು ಬುಲ್ಸ್‌ಗೆ ರೋಚಕ ಜಯ
ನಾಯಕ ಮಂಜೀತ್ ಚಿಲ್ಲರ್ ಅವರ ಆಕರ್ಷಕ ಪ್ರದರ್ಶನದಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್...

ಕೋಲ್ಕತಾ: ನಾಯಕ ಮಂಜೀತ್ ಚಿಲ್ಲರ್ ಅವರ ಆಕರ್ಷಕ ಪ್ರದರ್ಶನದಿಂದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್ ವಿರುದ್ಧ ಅರ್ಹ ಗೆಲುವು ಸಂಪಾದಿಸಿತು.
ಬುಧವಾರ ಇಲ್ಲಿನ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 31-26 ಅಂಕಗಳ ಅಂತರದಲ್ಲಿ ಜಯಿಸಿತು. ಈ ಮೂಲಕ ಟೂರ್ನಿಯಲ್ಲಿ ಎರಡನೇ ಜಯ ಗಳಿಸಿತು.
ಬೆಂಗಾಲ್ ಗೆ ರೋಚಕ ಜಯ:
ಮೊದಲ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡ ಅಂತಿಮ ಕ್ಷಣದಲ್ಲಿ ಮಿಂಚಿನ ಆಟವಾಡಿ ಪ್ರವಾಸಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಎರಡು ಪಾಯಿಂಟ್ಸ್‍ಗಳ ರೋಚಕ ಗೆಲುವು ಪಡೆಯಿತು.
ಆರಂಭಿಕ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದ ಬೆಂಗಾಲ್ ವಾರಿಯರ್ಸ್ ತಂಡವು ಕೊನೇ
ಕ್ಷಣದಲ್ಲಿ ತೋರಿದ ಚಮತ್ಕಾರಿ ಆಟದೆದುರು ಹಾಲಿ ಚಾಂಪಿಯನ್ಸ್ ಜೈಪುರ ಪಿಂಕ್ ಪ್ಯಾಂಥರ್ಸ್ 28-26ರಿಂದ ಸೋಲನುಭವಿಸಿತು. ಈ ಗೆಲುವಿನೊಂದಿಗೆ ವಾರಿಯರ್ಸ್ ಟೂರ್ನಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


