ಕ್ರೀಡೆ

ಟೆಸ್ಟ್‌ಗಳಲ್ಲಿನ ಗೆಲವು ನಮ್ಮ ಆದ್ಯತೆ: ಕೊಹ್ಲಿ

ಸೋತ ಪಂದ್ಯಗಳಿಂದ ಏನು ಕಲಿತೆವು ಎಂಬ ಲೆಕ್ಕಾಚಾರದಲ್ಲಿ ಮುಳುಗುವ ಕಾಲ ಮುಗಿಯಿತು. ಇನ್ನೇನಿದ್ದರೂ ಟೆಸ್ಟ್ ಪಂದ್ಯಗಳಲ್ಲಿ ಗೆಲವು ಪಡೆಯುವುದೊಂದೇ...

ಟೆಸ್ಟ್‌ಗಳಲ್ಲಿನ ಗೆಲವು ನಮ್ಮ ಆದ್ಯತೆ: ಕೊಹ್ಲಿ
ವಿರಾಟ್ ಕೊಹ್ಲಿ
Published On :

ಕೋಲ್ಕತಾ: ಸೋತ ಪಂದ್ಯಗಳಿಂದ ಏನು ಕಲಿತೆವು ಎಂಬ ಲೆಕ್ಕಾಚಾರದಲ್ಲಿ ಮುಳುಗುವ ಕಾಲ ಮುಗಿಯಿತು. ಇನ್ನೇನಿದ್ದರೂ ಟೆಸ್ಟ್ ಪಂದ್ಯಗಳಲ್ಲಿ ಗೆಲವು ಪಡೆಯುವುದೊಂದೇ ನಮ್ಮ ಗುರಿ - ಇದು ಟೀಂ ಇಂಡಿಯಾ ಟೆಸ್ಟ್ ತಂಡದ ನೂತನ ನಾಯಕ ವಿರಾಟ್ ಕೊಹ್ಲಿ ಅವರ ಖಡಕ್ ಮಾತು.

ಜೂ. 10ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ಸರಣಿಗೂ ಮುನ್ನ, ಕೋಲ್ಕತಾದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟೆಸ್ಟ್ ಕ್ರಿಕೆಟ್‍ನಲ್ಲೂ ಭಾರತ ಯಶಸ್ಸಿನ ಕುದುರೆಯೇರುವಂತೆ ಮಾಡುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು ಎಂದು ಎನ್‍ಡಿಟಿವಿ ವರದಿ ಮಾಡಿದೆ.

'ಈವರೆಗಿನ ಪಂದ್ಯಗಳಿಂದ ನಾವು ಸಾಕಷ್ಟು ಕಲಿತಿದ್ದೇವೆ. ಕಲಿಕೆ ನಿರಂತರ. ಹಾಗೆಂದ ಮಾತ್ರಕ್ಕೆ ಕಲಿಯುವುದು ಹಾಗೂ ಕಲಿಯುತ್ತಲೇ ಇರುವುದು ನಮ್ಮ ಏಕಮೇವ ಧ್ಯೇಯವಾಗಿರಬೇಕೆಂಬುದನ್ನು ನಾನು ಒಪ್ಪುವುದಿಲ್ಲ. ಟಿವಿಯಲ್ಲಿ ಪಂದ್ಯಗಳನ್ನು ನೋಡುವುದರಿಂದಲೂ ನಾವು ಕಲಿಯಬಹುದು. ಇದೆಲ್ಲವನ್ನು ಮೀರಿ ಟೆಸ್ಟ್ ಕ್ರಿಕೆಟ್‍ನಲ್ಲಿ ಗೆಲವು ಪಡೆಯುವ ಬಗ್ಗೆ ನಾವು ಪ್ರಯತ್ನಿಸಬೇಕು ಎಂದು ಕೊಹ್ಲಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.