ಬಾಂಗ್ಲಾ ವಿರುದ್ಧ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಭಾರತದಿಂದ ಭರ್ಜರಿ ಬ್ಯಾಟಿಂಗ್
ಇಂದಿನಿಂದ ಆರಂಭವಾಗಿರುವ ಆತಿಥೇಯ ಬಾಂಗ್ಲಾದೇಶದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಢಾಕಾ: ಇಂದಿನಿಂದ ಆರಂಭವಾಗಿರುವ ಆತಿಥೇಯ ಬಾಂಗ್ಲಾದೇಶದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿರುವ ಶಿಖರ್ ಧವನ್ 74ರನ್ ಹಾಗೂ ಮುರಳಿ ವಿಜಯ್ ಅವರು 33ರನ್ ಗಳಿಸಿ, ಆಟ ಮುಂದುವರಿಸಿದ್ದಾರೆ.
ಢಾಕಾದಲ್ಲಿರುವ ಶೇರೇ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಪಡೆ ಬಾಂಗ್ಲಾ ವಿರುದ್ಧ ಬ್ಯಾಟಿಂಗ್ ಭರ್ಜರಿ ಮಾಡುತ್ತಿದೆ.
ಕೆಲ ಬದಲಾವಣೆಗಳಿಂದಾಗಿ ಪುನರ್ಸ್ಥಾಪನೆಗೊಂಡಂತಿರುವ ಟೀಂ ಇಂಡಿಯಾ, ಮಹೇಂದ್ರ ಸಿಂಗ್ ಧೋನಿ ವಿದಾಯದ ಬಳಿಕ ಟೆಸ್ಟ್ ತಂಡಕ್ಕೆ ಪೂರ್ಣ ಪ್ರಮಾಣದ ನಾಯಕನಾಗಿರುವ ಕೊಹ್ಲಿ ಪಾಲಿಗಂತೂ ಈ ಪಂದ್ಯ ಮಹತ್ವದ್ದೆನಿಸಿದೆ.
ಈ ಏಕೈಕ ಟೆಸ್ಟ್ ಪಂದ್ಯದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಏಕದಿನ ಸರಣಿಗೆ ಆತ್ಮವಿಶ್ವಾಸದಿಂದ ಸಜ್ಜಾಗಲು ಎರಡೂ ತಂಗಳ ಆಟಗಾರರು ದೊಡ್ಡ ಕನಸನ್ನೇ ಕಟ್ಟಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


