ಕ್ರೀಡೆ

ಫೋರ್ಬ್‌ಸ್‌ನ 100 ಶ್ರೀಮಂತ ಆಟಗಾರರ ಪಟ್ಟಿಯಲ್ಲಿ ಏಕೈಕ ಭಾರತೀಯ ಧೋನಿ

ಫೋರ್ಬ್‌ಸ್ ನಿಯತಲಾಕಿಗೆ ಪ್ರಕಟಿಸಿರುವ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ವಿಶ್ವದ 100 ಆಟಗಾರರ ಪಟ್ಟಿಯಲ್ಲಿ ಏಕೈಕ ಭಾರತೀಯ,...

ಫೋರ್ಬ್‌ಸ್‌ನ 100 ಶ್ರೀಮಂತ ಆಟಗಾರರ ಪಟ್ಟಿಯಲ್ಲಿ ಏಕೈಕ ಭಾರತೀಯ ಧೋನಿ
ಮಹೇಂದ್ರ ಸಿಂಗ್ ಧೋನಿ
Published On :

ನ್ಯೂಯಾರ್ಕ್: ಫೋರ್ಬ್‌ಸ್ ನಿಯತಲಾಕಿಗೆ ಪ್ರಕಟಿಸಿರುವ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ವಿಶ್ವದ 100 ಆಟಗಾರರ ಪಟ್ಟಿಯಲ್ಲಿ ಏಕೈಕ ಭಾರತೀಯ, ಟೀಂ ಇಂಡಿಯಾದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಸ್ಥಾನ ಪಡೆದಿದ್ದಾರೆ.

ಪಟ್ಟಿಯಲ್ಲಿ ಅಮೆರಿಕಾದ ಬಾಕ್ಸರ್ ಫ್ಲಾಯ್ಡ್ ಮೇವೆದರ್ ಮತ್ತೆ ಮೊದಲ ಸ್ಥಾನ ಪಡೆದಿದ್ದು, ಗಾಲ್ಫರ್ ಟೈಗರ್ ವೂಡ್, ಟೆನ್ನಿಸ್ ತಾರೆ ರೋಜರ್ ಫೆಡೆರರ್ ಹಾಗೂ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ನಂತರದ ಸ್ಥಾನದಲ್ಲಿದ್ದಾರೆ.

2015ನೇ ಸಾಲಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ಆಟಗಾರರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು 23ನೇ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ 22ನೇ ಸ್ಥಾನ ಪಡೆದಿದ್ದರು.

33 ವರ್ಷದ ಕ್ರಿಕೆಟಿಗ ಕಳೆದ ವರ್ಷದ ಅಂತ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಏಕ ದಿನ ಹಾಗೂ ಟಿ20 ಕ್ರಿಕೆಟ್ ತಂಡದ ನಾಯಕರಾಗಿ ಮುಂದುವರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.