22 ರಿಂದ ಸೇವ್ ದ ಟೈಗರ್ ಕ್ರಿಕೆಟ್ ಪಂದ್ಯಾವಳಿ ಆರಂಭ
ಸೇವ್ ದ ಟೈಗರ್ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೈಸೂರು ವಲಯ ವ್ಯಾಪ್ತಿಯಲ್ಲಿ ಜೂ. 22 ರಿಂದ 30 ರವರೆಗೆ ಆಯೋಜಿಸಲಾಗಿದೆ. 14 ಮತ್ತು 16 ವರ್ಷದೊಳಗಿನವರ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡೂ ವಿಭಾಗಗಳಿಂದ ತಲಾ 8 ತಂಡಗಳು ಪಾಲ್ಗೊಳ್ಳುತ್ತಿವೆ...

ಮೈಸೂರು: ಸೇವ್ ದ ಟೈಗರ್ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೈಸೂರು ವಲಯ ವ್ಯಾಪ್ತಿಯಲ್ಲಿ ಜೂ. 22 ರಿಂದ 30 ರವರೆಗೆ ಆಯೋಜಿಸಲಾಗಿದೆ. 14 ಮತ್ತು 16 ವರ್ಷದೊಳಗಿನವರ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡೂ ವಿಭಾಗಗಳಿಂದ ತಲಾ 8 ತಂಡಗಳು ಪಾಲ್ಗೊಳ್ಳುತ್ತಿವೆ.
ಕ್ರಿಕೆಟ್‍ಗೆ ಉತ್ತೇಜನ ನೀಡುವುದು, ನಶಿಸುತ್ತಿರುವ ಹುಲಿ ಸಂತತಿಯನ್ನು ಉಳಿಸುವುದು, ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಜಾಗೃತಿ ಮೂಡಿಸಲು ಸೈಕಲ್ ಪ್ಯೂರ್ ಅಗರಬತ್ತಿ ಪ್ರಾಯೋಜಕತ್ವದಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಈ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯಶಸ್ಸಿನ ಬಳಿಕ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪಂದ್ಯಾವಳಿಯ ಸಂಚಾಲಕ ಜೋಸೆಫ್ ಹೂವರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೆಎಸ್‍ಸಿಎ ಮಾನ್ಯತೆ ಹೊಂದಿದ ಶಾಲೆಗಳು ಮತ್ತು ಕ್ಲಬ್ ಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿವೆ. 14 ವರ್ಷದೊಳಗಿನವರ ಪಂದ್ಯಗಳು ಮಾನಸ ಗಂಗೋತ್ರಿಯ ಕಾಫಿ ಬೋರ್ಡ್ ಮೈದಾನ, 16 ವರ್ಷದೊಳಗಿನವರ ಪಂದ್ಯಗಳು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪ್ರತಿ ವಿಭಾಗದಲ್ಲಿ ಎ ಮತ್ತು ಬಿ ಎಂದು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ ಎಂದು ಅವರು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


