ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಸಿಸಿಐ ಟೆಂಡರ್ ಆಹ್ವಾನ
ಮೈಕ್ರೋಮ್ಯಾಕ್ಸ್ ಜತೆಗಿನ ಶೀರ್ಷಿಕೆ ಪ್ರಾಯೋಜಕತ್ವ ಒಪ್ಪಂದ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಸಾಲಿನ ಪ್ರಾಯೋಜಕತ್ವಕ್ಕೆ ಬಿಸಿಸಿಐ ಟೆಂಡರ್ ಕರೆದಿದೆ.

ನವದೆಹಲಿ: ಪ್ರಸಕ್ತ ದೇಶೀಯ ಕ್ರಿಕೆಟ್ ಋತು ಅಂತ್ಯವಾಗುತ್ತಿದ್ದಂತೆ ಮೈಕ್ರೋಮ್ಯಾಕ್ಸ್ ಜತೆಗಿನ ಶೀರ್ಷಿಕೆ ಪ್ರಾಯೋಜಕತ್ವ ಒಪ್ಪಂದ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಸಾಲಿನ ಪ್ರಾಯೋಜಕತ್ವಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೆಂಡರ್ ಕರೆದಿದೆ.
2019 ವರೆಗೆ ಭಾರತದಲ್ಲಿ ಆಯೋಜಿಸಲಾಗಿರುವ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಾವಳಿಯ ಶೀರ್ಷಿಕೆ ಪ್ರಾಯೋಜಕತ್ವ ವಹಿಸಿಕೊಳ್ಳಲು ಈಗ ಟೆಂಡರ್ ಕರೆಯಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2015 -16 , 2016 -2017 , 2017 -2018 ಮತ್ತು 2018 -19 ನೇ ಸಾಲಿನ ಕ್ರಿಕೆಟ್ ಋತುವಿನಲ್ಲಿ ತವರಿನಲ್ಲಿ ನಡೆಯಲಿರಿರುವ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪಂದ್ಯಾವಳಿಗಳಿಗೆ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಟೆಂಡರ್ ಆಹ್ವಾನ ಪ್ರಕಟಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಈ ಒಪ್ಪಂದದಲ್ಲಿ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಟೂರ್ನಿ ವೇಳೆ ಪ್ರಾಯೋಜಕತ್ವದ ಲೋಗೊ, ಶೀರ್ಷಿಕೆ ಪ್ರಾಯೋಜಕತ್ವ ಎಂಬ ಅಧಿಕೃತ ಸ್ಥಾನ ನೀಡಲಾಗುವುದು. ಅಲ್ಲದೆ ಪಂದ್ಯ ನಡೆಯುವ ಮೈದಾನದಲ್ಲಿ ಆ ಕಂಪನಿಯ ಲೋಗೊ ಬಳಕೆ, ಪ್ರಸಾರ ಪ್ರಾಯೋಜಕತ್ವದ ಲೋಗೊ ಹಾಗೂ ಯಾತ್ರೆ ಹಕ್ಕುಗಳನ್ನು ಪಡೆಯಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


