ತೆಂಡೂಲ್ಕರ್ 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರ
ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ನವದೆಹಲಿ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾ ನಡೆಸಿದ ಆನ್‌ಲೈನ್ ಮತದಾನದಲ್ಲಿ ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ.
ಈ ಆನ್‌ಲೈನ್ ಮತದಾನದಲ್ಲಿ ಒಟ್ಟು 16 ಸಾವಿರ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಮತದಾನ ನಡೆದ ಹತ್ತು ದಿನಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿದೆ.
ಸಚಿನ್ ತೆಂಡೂಲ್ಕರ್ ಅವರು ಶೇ.23ರಷ್ಟು ಮತ ಪಡೆದು ಮೊದಲ ಸ್ಥಾನದಲ್ಲಿದ್ದು, ಶ್ರೀಲಂಕಾದ ಕುಮಾರ್ ಸಂಗಕ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಅಡಂ ಗಿಲ್‌ಕ್ರಿಸ್ಟ್ ಮತ್ತು ರಿಕ್ಕಿ ಪಾಂಟಿಂಗ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಕ್ವಾಸ್ ಕಾಲಿಸ್ ನಂತರದ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


