ಕ್ರೀಡೆ

ಗೋಸ್ವಾಮಿ ಗೆಲುವಿನ ಗಾನ

ಹಿರಿಯ ಆಟಗಾರ್ತಿ ಜುಲನ್ ಗೋಪಾಲಸ್ವಾಮಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಬೌಲರ್ ಗಳ ಶಿಸ್ತುಬದ್ಧ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಗೆಲುವು ದಾಖಲಿಸಿದ್ದಾರೆ.

ಗೋಸ್ವಾಮಿ ಗೆಲುವಿನ ಗಾನ
ಮಹಿಳಾ ಕ್ರಿಕೆಟ್ ನ ಭಾರತ ತಂಡ(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮುಂಬರುವ 2017 ಮಹಿಳಾ ವಿಶ್ವಕಪ್ ಗೆ ಅರ್ಹತೆ ಪಡೆಯಲು ಯತ್ನಿಸುತ್ತಿರುವ ಭಾರತದ ವನಿತೆಯರು, ಹಿರಿಯ ಆಟಗಾರ್ತಿ ಜುಲನ್ ಗೋಪಾಲಸ್ವಾಮಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಬೌಲರ್ ಗಳ ಶಿಸ್ತುಬದ್ಧ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಗೆಲುವು ದಾಖಲಿಸಿದ್ದಾರೆ.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ 17 ರನ್ ಗಳ ಅಂತರದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ ಐಸಿಸಿಯ ರ್ಯಾಂಕಿಂಗ್ ನಲ್ಲಿ ಅತ್ಯಮೂಲ್ಯ ಎರಡು ಅಂಕಗಳನ್ನು ಗಳಿಸಿದೆ. ಐದು ಏಕದಿನ ಸರಣಿಯ ಈ ಟೂರ್ನಿಯಲ್ಲಿ ಆರಂಭಿಕ ಮೂರು ಪಂದ್ಯಗಳ ಫಲಿತಾಂಶಕ್ಕೆ ಅಂಕಗಳನ್ನು ಪರಿಗಣಿಸಲಾಗುತ್ತಿದ್ದು ಭಾರತದ ಪಾಲಿಗೆ ಈ ಪಂದ್ಯಗಳು ಮಹತ್ವದ್ದಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಆರಂಭಿಕ ವೈಫಲ್ಯದಿಂದಾಗಿ 44 .3 ಓವರ್ ಗಳಲ್ಲಿ 142 ರನ್ ದಾಖಲಿಸಿದರು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್, 45 .3 ಓವರ್ ಗಳಲ್ಲಿ 125 ರನ್ ಗಳಿಗೆ ಅಲೌಟ್ ಆಯಿತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.