ಕ್ರೀಡೆ

ವಿಶ್ವಕಪ್: ಐರ್ಲೆಂಡ್ ವಿರುದ್ಧ ದ.ಆಫ್ರಿಕಾಗೆ ಭರ್ಜರಿ ಜಯ

ವಿಶ್ವಕಪ್ ಟೂರ್ನಿಯಲ್ಲಿ ಮಂಗಳವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭರ್ಜರಿ 201ರನ್ ಗಳ ಬೃಹತ್ ಅಂತರದ ಗೆಲವು ದಾಖಲಿಸಿದೆ..

ವಿಶ್ವಕಪ್: ಐರ್ಲೆಂಡ್ ವಿರುದ್ಧ ದ.ಆಫ್ರಿಕಾಗೆ ಭರ್ಜರಿ ಜಯ
ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ ಆಟಗಾರರು (ಸಂಗ್ರಹ ಚಿತ್ರ)
Published On :

ಕ್ಯಾನ್ ಬೆರಾ: ವಿಶ್ವಕಪ್ ಟೂರ್ನಿಯಲ್ಲಿ ಮಂಗಳವಾರ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭರ್ಜರಿ 201ರನ್ ಗಳ ಬೃಹತ್ ಅಂತರದ ಗೆಲವು ದಾಖಲಿಸಿದೆ.

ಕ್ಯಾನ್ ಬೆರಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಆಟಗಾರ ಹಶೀಂ ಆಮ್ಲಾ ದಾಖಲೆಯ ಶತಕ (159ರನ್, 169 ಎಸೆತ )ಮತ್ತು ಡುಪ್ಲೆಸಿಸ್ ಅವರ ಅಮೋಘ ಶತಕ (109ರನ್, 140 ಎಸೆತ)ದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ  411ರನ್ ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಆರಂಭದಿಂದಲೂ ಭರ್ಜರಿಯಾಗಿ ಆಡಿದ ಹಶೀಂ ಆಮ್ಲಾ ಮತ್ತು ಡುಪ್ಲೆಸಿಸ್, ಐರ್ಲೆಂಡ್ ಆಟಗಾರರನ್ನು ಮನಸೋ ಇಚ್ಛೆ ದಂಡಿಸಿದರು. ಮಧ್ಯಮ ಕ್ರಮಾಂಕದ ಆಟಗಾರ ರಾಸ್ಸೋವ್ ಅವರು (61 ರನ್, 39 ಎಸೆತ) ಕೂಡ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 400ರ ಗಡಿ ದಾಟಿಸಿದರು.

ಕೇವಲ 4 ವಿಕೆಟ್ ಗಳನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾ ತಂಡ ನಿಗದಿತ 50 ಓವರ್ ಗಳಲ್ಲಿ 411ರನ್ ಗಳಿಸಿತು. ಆ ಮೂಲಕ ಐರ್ಲೆಂಡ್ ತಂಡಕ್ಕೆ ಗೆಲ್ಲಲು 412ರನ್ ಗಳ ಬೃಹತ್ ಗುರಿಯನ್ನು ನೀಡಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಐರ್ಲೆಂಡ್ ಆಟಗಾರರು ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದರು. ಒಂದು ಹಂತದಲ್ಲಿಯಂತೂ ಕೇವಲ 3ರನ್ ಗಳ ಅಂತರದಲ್ಲಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಐರ್ಲೆಂಡ್ ಹೀನಾಯ ಸ್ಥಿತಿಗೆ ತಲುಪಿತ್ತು.

ಈ ಹಂತದಲ್ಲಿ ತಂಡಕ್ಕೆ ಆಸರೆಯಾಗಿದ್ದು ಮಧ್ಯಮ ಕ್ರಮಾಂಕದ ಆಟಗಾರ ಬಾಲ್ ಬರ್ನಿ. ಸಮಯೋಚಿತ ಆಟವಾಡಿದ ಬಾಲ್ ಬರ್ನಿ ಅರ್ಧಶತಕ ಸಿಡಿಸಿ ತಂಡವನ್ನು ಸಂಕಷ್ಟದ ಸ್ಥಿತಿಯಿಂದ ಮೇಲೆತ್ತಲು ಪ್ರಯತ್ನಿಸಿದರಾದರೂ ಅದು ಸಾಧ್ಯವಾಗಲಿಲ್ಲ. ಅಂತಿಮವಾಗಿ ಐರ್ಲೆಂಡ್ ತಂಡ 45 ಓವರ್ ಗಳಲ್ಲಿ ಕೇವಲ 210ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಆ ಮೂಲಕ ದಕ್ಷಿಣ ಆಫ್ರಿಕಾಗೆ 201ರನ್ ಗಳ ಅಂತರದಿಂದ ಶರಣಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.