ಕ್ರೀಡೆ

ಕಳಂಕ ತೊಡೆದುಹಾಕುವೆ: ದಾಲ್ಮಿಯಾ

ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಂತೆ, ನೂತನವಾಗಿ ಬಿಸಿಸಿಐ ಅಧಿಕಾರದ ಚುಕ್ಕಾಣಿ ಹಿಡಿದಿರುವ ಜಗಮೋಹನ್ ದಾಲ್ಮಿಯಾ ಸಹ ಬಿಸಿಸಿಐ ಸ್ವಚ್ಛತೆಗೆ ಮುಂದಾಗಿದ್ದಾರೆ...

ಕಳಂಕ ತೊಡೆದುಹಾಕುವೆ: ದಾಲ್ಮಿಯಾ
ಜಗಮೋಹನ್ ದಾಲ್ಮಿಯಾ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಂತೆ, ನೂತನವಾಗಿ ಬಿಸಿಸಿಐ ಅಧಿಕಾರದ ಚುಕ್ಕಾಣಿ ಹಿಡಿದಿರುವ ಜಗಮೋಹನ್ ದಾಲ್ಮಿಯಾ ಸಹ ಬಿಸಿಸಿಐ ಸ್ವಚ್ಛತೆಗೆ ಮುಂದಾಗಿದ್ದಾರೆ.

ಫಿಕ್ಸಿಂಗ್, ಬೆಟ್ಟಿಂಗ್ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ನಡೆಯಿಂದಾಗಿ ಬಿಸಿಸಿಐಗೆ ಅಂಟಿರುವ ಕಳಂಕಗಳ ಸರಮಾಲೆಯನ್ನು ತೊಡೆದುಹಾಕಿ ಬಿಸಿಸಿಐಯನ್ನು ಪರಿಶುದ್ಧಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಇತ್ತೀಚಿನ ಘಟನಾವಳಿಗಳಿಂದ ಬಿಸಿಸಿಐನ ವರ್ಚಸ್ಸಿಗೆ ಧಕ್ಕೆಯಾಗಿದ್ದು ನಿಜ. ಹಾಗಾಗಿ, ಕಳೆದುಕೊಂಡ ವರ್ಚಸ್ಸನ್ನು ಪುನರ್ ಸ್ಥಾಪಿಸುವುದೇ ನನ್ನ ಮೊದಲ ಗುರಿ. ಅಲ್ಲದೆ, ಶೀಘ್ರದಲ್ಲೇ ಆರಂಭಗೊಳ್ಳಲಿರುವ ಐಪಿಎಲ್ ಪಂದ್ಯಾವಳಿಯು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳುವುದೂ ನನ್ನ ಮತ್ತೊಂದು ಆದ್ಯತೆ' ಎಂದು ತಿಳಿಸಿದರು.

ಶುಭಾಷಯ: ಹಾಲಿ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡಕ್ಕೆ ಶುಭ ಕೋರಿದ ನೂತನ ಅಧ್ಯಕ್ಷರು, ಟೂರ್ನಿಯಲ್ಲಿ ಭಾರತ ತಂಡ ಉತ್ತಮ ಯಶಸ್ಸು ದಾಖಲಿಸಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.