ಸೈನಾ ನೆಹ್ವಾಲ್‍ಗೆ ಬರ್ತಡೇ ಗಿಫ್ಟ್..!
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಿನ್ನಲೆಯಲ್ಲಿ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಭಾರತೀಯ ಬ್ಯಾಡ್ಮಿಂಟನ್...

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಿನ್ನಲೆಯಲ್ಲಿ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ರು 5 ಲಕ್ಷ ನಗದು ಬಹುಮಾನ ಘೋಷಿಸಿದೆ.
ಶುಕ್ರವಾರ (ಮಾ. 17) ಸೈನಾ ತಮ್ಮ 25ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ಸಂದರ್ಭದಲ್ಲಿ ಅವರಿಗೆ ಬಿಎಐನಿಂದ ನಗದು ಪುರಸ್ಕಾರ ಸಿಕ್ಕಿರಿವುದು ಅವರ ಸಂತಸವನ್ನು ಇಮ್ಮಡಿಗೊಳಿಸಿದೆ.
ಕಾಮನ್ ವೆಲ್ಚ್ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಿ.ಕಶ್ಯಪ್ ಅವರಿಗೆ ಬಿಎಐ, ಸೋಮವಾರ ರು.5ಲಕ್ಷ ಬಹುಮಾನ ಘೋಷಿಸಿತ್ತು. ಅದರ ಬೆನ್ನಲ್ಲೇ ಇತ್ತೀಚೆಗೆ ನಡೆದ ಆಲ್ ಇಂಗ್ಲೆಂಡ್ ಸೂಪರ್ ಸಿರೀಸ್ ಪ್ರೀಮಿಯರ್ ಪಂದ್ಯಾವಳಿಯಲ್ಲಿ ರನ್ನರ್ ಅಪ್ ಪದಕ ಪಡೆದಿರುವ ಸೈನಾ ಅವರಿಗೂ ನಗದು ಪುರಸ್ಕಾರ ಘೋಷಿಸಿದೆ. ಈ ಇಬ್ಬರೂ ಪ್ರಸಕ್ತ ವರ್ಷದ ಸಯ್ಯದ್ ಮೋದಿ ಗ್ರಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಚಾಂಪಿಯನ್ ಗಳಾಗಿ ಹೊರಹೊಮ್ಮಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


