ಕ್ರೀಡೆ

ವಿಶ್ವಕಪ್: ಸಂಕಷ್ಟದಲ್ಲಿ ಭಾರತ, ಪಂದ್ಯದ ಮೇಲೆ ಆಸ್ಟ್ರೇಲಿಯಾ ಬಿಗಿ ಹಿಡಿತ

ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನೀಡಿರುವ 329 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿರುವ ಟೀಇಂಡಿಯಾ ಪ್ರಮುಖ 4 ವಿಕೆಟ್..

ವಿಶ್ವಕಪ್: ಸಂಕಷ್ಟದಲ್ಲಿ ಭಾರತ, ಪಂದ್ಯದ ಮೇಲೆ ಆಸ್ಟ್ರೇಲಿಯಾ ಬಿಗಿ ಹಿಡಿತ
ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ
Published On :

ಸಿಡ್ನಿ: ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನೀಡಿರುವ 329 ರನ್ ಗಳ ಬೃಹತ್ ಮೊತ್ತವನ್ನು ಬೆನ್ನುಹತ್ತಿರುವ ಟೀಇಂಡಿಯಾ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಆಘಾತ ಅನುಭವಿಸಿದೆ.

ಬೃಹತ್‌ ಸವಾಲು ಬೆನ್ನಟ್ಟಿದ ಭಾರತ 20 ಓವರ್‌ಗಳ ಬಳಿಕ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ರೋಹಿತ್ ಶರ್ಮಾ (34 ರನ್), ಶಿಖರ್ ಧವನ್ (45ರನ್), ವಿರಾಟ್ ಕೊಹ್ಲಿ (1 ರನ್) ಮತ್ತು ಸುರೇಶ್ ರೈನಾ (7 ರನ್) ಅವರ ವಿಕೆಟ್ ಪತನವಾಗಿದೆ. ಟೀಂ ಇಂಡಿಯಾದ ಭರವಸೆಯ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಕೇವಲ 1 ರನ್‌ಗೆ ಔಟಾಗುವ ಮೂಲಕ ಭಾರಿ ನಿರಾಸೆ ಮೂಡಿಸಿದರು. ಜಾನ್ಸನ್‌ ಎಸೆದ ಬೌನ್ಸರನ್ನು ಬೌಂಡರಿಗೆ ಅಟ್ಟುವ ಭರದಲ್ಲಿ ಕೆಟ್ಟ ಹೊಡೆತಕ್ಕೆ ಮುಂದಾಗಿ ವಿಕೆಟ್‌ ಕೀಪರ್ ಹ್ಯಾಡಿನ್‌ಗೆ ಕ್ಯಾಚಿತ್ತು ಕೊಹ್ಲಿ ನಿರ್ಗಮಿಸಿದರು. ಬಳಿಕ ಬಂದ ರೈನಾ ಕೂಡ ಕೇವಲ 7 ರನ್ ಗಳಿಸಿ ಔಟಾದರು.

ಈ ಹಂತದಲ್ಲಿ ಪಂದ್ಯ ಭಾರತದ ಕೈಯಿಂದ ಆಸ್ಟ್ರೇಲಿಯಾದತ್ತ ವಾಲಿತ್ತು. ಈ ಹಂತದಲ್ಲಿ ಜೊತೆಯಾದ ನಾಯಕ ಧೋನಿ ಮತ್ತು ಮಧ್ಯಮ ಕ್ರಮಾಂಕದ ಆಟಗಾರ ಅಂಜಿಕ್ಯಾ ರಹಾನೆ ಸಂಕಷ್ಟದಲ್ಲಿರುವ ಭಾರತಕ್ಕೆ ಆಸರೆಯಾಗಿದ್ದರು. 36 ರನ್ ಗಳಿಸಿರುವ ಧೋನಿ ಉತ್ತಮವಾಗಿ ಆಡುತ್ತಿದ್ದು, 44 ರನ್ ಗಳಿಸಿ ಅರ್ಧಶತಕದ ಹೊಸ್ತಿಲಲ್ಲಿದ್ದ ರಹಾನೆ ಸ್ಟಾರ್ಕ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.