ಭಾರತಕ್ಕೆ ಸೋಲು: ಅನುಷ್ಕಾ ವಿರುದ್ಧ ಟ್ವಿಟರ್ ನಲ್ಲಿ ಅಸಮಾಧಾನ
ವಿಶ್ವಕಪ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಸೋಲು ಕಾಣುವುದಕ್ಕೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ..

ಮುಂಬೈ: ವಿಶ್ವಕಪ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಸೋಲು ಕಾಣುವುದಕ್ಕೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೇ ಕಾರಣ ಎಂದು ಕೆಲ ಕ್ರಿಕೆಟ್ ಪ್ರೇಮಿಗಳು ಆರೋಪಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಹೀನಾಯ ಸೋಲು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಅತೀವವಾದ ನೋವು, ನಿರಾಶೆ, ಸಿಟ್ಟಿಗೆ ಕಾರಣವಾಗಿದೆ. ಭಾರತೀಯ ಬ್ಯಾಟ್ಸಮನ್‌ಗಳ ಪೈಕಿ ಪ್ರಮುಖವಾಗಿ ವಿರಾಟ್ ಕೊಹ್ಲಿ ಮತ್ತು ಗೆಳತಿ ಆನುಷ್ಕಾ ಶರ್ಮಾ ವಿರುದ್ಧ ಕ್ರೀಡಾ ಪ್ರೇಮಿಗಳು ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಉತ್ತಮ ಫಾರ್ಮ್ ನಲ್ಲಿದ್ದರೂ ಕೇವಲ 1 ರನ್ ಹೊಡೆದು ಔಟಾಗಿರುವ ವಿರಾಟ್ ಕೊಹ್ಲಿ ವೈಫಲ್ಯಕ್ಕೆ ಅನುಷ್ಕಾ ಶರ್ಮಾ ಅವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಕ್ರೀಡಾಂಗಣಕ್ಕೆ ಆಗಮಿಸಿದ್ದರಿಂದ ಕೊಹ್ಲಿ ಕ್ರಿಕೆಟ್ ಮರೆತರು. ಹೀಗಾಗಿ ಬೇಗನೇ ಪಿವಿಲಿಯನ್ ಸೇರಿಕೊಂಡ ಪರಿಣಾಮ ಭಾರತ ಹೀನಾಯವಾಗಿ ಸೋತಿದೆ ಎಂದು ಕೆಲವು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಅನುಷ್ಕಾ ಕುಳಿತಿದ್ದರಿಂದಲೇ ವಿರಾಟ್ ಕೊಹ್ಲಿ ಗಮನ ಆತನ ಆಟದ ಕಡೆಗೆ ಹೋಗಲಿಲ್ಲ. ಬದಲಿಗೆ ಅನುಷ್ಕಾಳತ್ತಲೇ ವಾಲಿದ್ದರಿಂದ ಆತ ಕೇವಲ 1 ರನ್‌ಗೆ ಔಟಾಗಿ ಪೆವಿಲಿಯನ್‌ಗೆ ಮರಳಿದ ಎಂದು ಟ್ವಿಟರ್‌ನಲ್ಲಿ ಹಲವು ಮಂದಿ ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


