ಪ್ರಣಯ್ ಗೆ ಗೆಲವು, ಕಶ್ಯಪ್‍ಗೆ ಸೋಲು
ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್ ಪ್ರಣಯ್, ಇಂಡಿಯ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ...

ನವದೆಹಲಿ: ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್ ಪ್ರಣಯ್, ಇಂಡಿಯ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಗೆಲವು ದಾಖಲಿಸಿದ್ದಾರೆ. ಇನ್ನು ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ ಪಿ.ಕಶ್ಯಪ್ ಸೋಲನುಭವಿಸುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.
ಸಿರಿ ಫೋರ್ಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 17ನೇ ರ್ಯಾಂಕಿಂಗ್‍ನ ಪ್ರಣಯ್, ಪ್ರಶಸ್ತಿ ಗೆಲ್ಲುವ ಫೇವರಿಟ್ ಆಟಗಾರ ಎಂದೇ ಬಿಂಬಿತವಾಗಿರುವ 2ನೇ ರ್ಯಾಂಕಿಂಗ್‍ನ ಜಾನ್ ಒ ಜೊರ್ಗೆನ್ಸನ್ ಅವರನ್ನು ಮಣಿಸುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಈ ಮೂಲಕ ಪ್ರಣಯ್ ಅಂತಿಮ ಎಂಟರ ಘಟ್ಟಕ್ಕೆ ಪ್ರವೇಶಿಸಿದ್ದಾರೆ. ಆರಂಭದಲ್ಲಿ ಮುಗ್ಗರಿಸಿದರೂ ನಂತರ ಹೋರಾಟಕಾರಿ ಪ್ರದರ್ಶನ ನೀಡಿದ ಪ್ರಣಯ್ 18-21, 21-14, 21-14 ಗೇಮ್ ಗಳ ಅಂತರದಲ್ಲಿ ಗೆಲವು ದಾಖಲಿಸಿದರು.
ಇನ್ನು ಕಶ್ಯಪ್, ಚೀನಾದ ಕ್ಯೂ ಸಾಂಗ್ ವಿರುದ್ಧ 17-21, 21-11 ಗೇಮ್ ಗಳ ಅಂತರದಲ್ಲಿ ಸೋಲನುಭವಿಸಿದರು. ಇನ್ನು ಸೈನಾ ನೆಹ್ವಾಲ್ ತಮ್ಮ ಎದುರಾಳಿ ರಾಷ್ಟ್ರೀಯ ಚಾಂಪಿಯನ್ ರುತ್ವಿಕಾ ಶಿವಾನಿ ವಿರುದ್ಧ 21-16, 21-17 ಗೇಮ್ ಗಳ ಅಂತರದಲ್ಲಿ ಗೆದ್ದರು. ಕೆ.ಶ್ರೀಕಾಂತ್ ಎದುರಾಳಿ ಜಪಾನ್‍ನ ಕೆಂಟೊ ಮೊಮೊಟ ವಿರುದ್ಧ 21-12, 15-21, 21-15 ಗೇಮ್ ಗಳ ಅಂತರದಲ್ಲಿ ಗೆದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


