ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋಲು: ಧೋನಿ ಮನೆಗೆ ಬಿಗಿ ಭದ್ರತೆ
ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮನೆಗೆ...

ನವದೆಹಲಿ: ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮನೆಗೆ ಬಿಗಿಭದ್ರತೆ ಒದಗಿಸಲಾಗಿದೆ. ರಾಂಚಿಯಲ್ಲಿರುವ ಅವರ ಬಂಗಲೆಗೆ ಅರೆಸೇನಾಪಡೆ ಯೋಧರು ಸುತ್ತುವರಿದಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದಾರೆ.
ಇದರ ಜೊತೆಗೇ, ವಿವಿಧ ನಗರಗಳಲ್ಲಿರುವ ಟೀಂ ಇಂಡಿಯಾ ಆಟಗಾರರ ಮನೆಗಳಿಗೂ ಭದ್ರತೆ ಒದಗಿಸಲಾಗಿದೆ. ಈ ಹಿಂದೆ, ಕೆಲವು ಪಂದ್ಯಾವಳಿಗಳಲ್ಲಿ ಭಾರತ ವೈಫಲ್ಯ ಅನುಭವಿಸಿದ್ದಾಗ, ಉದ್ರಿಕ್ತಗೊಂಡಿದ್ದ ಟೀಂ ಇಂಡಿಯಾದ ಕೆಲ ಅಭಿಮಾನಿಗಳು ಧೋನಿ ಹಾಗೂ ಇತರ ಆಟಗಾರರ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


