ವಿಶ್ವಕಪ್ ೨೦೧೫ ಫೈನಲ್ಸ್ ಪಂದ್ಯದೊಂದಿಗೆ ಕ್ಲಾರ್ಕ್ 'ಒಂದು ದಿನದ ಕ್ರಿಕೆಟ್ ಜೀವನ' ಅಂತ್ಯ
ನ್ಯೂಜೀಲ್ಯಾಂಡ್ ವಿರುದ್ಧ ಭಾನುವಾರ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಫೈನಲ್ಸ್ ಪಂದ್ಯ ತಮ್ಮ ಕೊನೆಯ ಒಂದು ದಿನದ ಅಂತರಾಷ್ಟ್ರೀಯ ಪಂದ್ಯವಾಗಲಿದೆ

ಮೆಲ್ಬರ್ನ್: ನ್ಯೂಜೀಲ್ಯಾಂಡ್ ವಿರುದ್ಧ ಭಾನುವಾರ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಫೈನಲ್ಸ್ ಪಂದ್ಯ ತಮ್ಮ ಕೊನೆಯ ಒಂದು ದಿನದ ಅಂತರಾಷ್ಟ್ರೀಯ ಪಂದ್ಯವಾಗಲಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಮೈಕೆಲ್ ಕ್ಲಾರ್ಕ್ ಘೋಷಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ ಮುಂದುವರೆಸಲಿರುವ ಕ್ಲಾರ್ಕ್, ಒಂದು ದಿನದ ಕ್ರಿಕೆಟ್ ಪಂದ್ಯಗಳಿಂದ ವಿರಾಮ ತೆಗೆದುಕೊಳ್ಳುವುದರಿಂದ ತಮ್ಮ ಕ್ರಿಕೆಟ್ ಜೀವನ ದೀರ್ಘಾವಧಿಗೆ ಮುಂದುವರೆಯಲಿದೆ ಎಂದಿದ್ದಾರೆ.
ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಫೈನಲ್ಸ್ ಪಂದ್ಯ ಕ್ಲಾರ್ಕ್ ಅವರಿಗೆ ಇದು ಎರಡನೆ ವಿಶ್ವಕಪ್ ಹಾಗೂ ೨೪೫ನೆ ಒಂದು ದಿನದ ಕ್ರಿಕೆಟ್ ಪಂದ್ಯ.
ಮುಂದಿನವಾರ ೩೪ನೆ ವಸಂತಕ್ಕೆ ಕಾಲಿಡಲಿರುವ ಕ್ಲಾರ್ಕ್ "ಇದು ಸರಿಯಾದ ಸಮಯ" ಎಂದು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


