ವೆಸ್ಟ್ ಇಂಡೀಸ್‍ಗೆ ಭರ್ಜರಿ ಜಯ
ಮಧ್ಯಮ ಕ್ರಮಾಂಕದಲ್ಲಿ ಡಾರೆನ್ ಬ್ರಾವೊ ಮತ್ತು ಜರ್ಮೇನ್ ಬ್ಲ್ಯಾಕ್‍ವುಡ್ ಉತ್ತಮ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ವಿರುದ್ಧದ ಮೂರನೇ...

ಬ್ರಿಜ್‍ಟೌನ್: ಮಧ್ಯಮ ಕ್ರಮಾಂಕದಲ್ಲಿ ಡಾರೆನ್ ಬ್ರಾವೊ ಮತ್ತು ಜರ್ಮೇನ್ ಬ್ಲ್ಯಾಕ್‍ವುಡ್ ಉತ್ತಮ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಭರ್ಜರಿ ಗೆಲವು ತಂದುಕೊಟ್ಟಿದ್ದಾರೆ.
ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 5 ವಿಕೆಟ್‍ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಕೇವಲ ಮೂರು ದಿನಗಳ ಆಟದಲ್ಲಿಯೇ ವಿಂಡೀಸ್ ಪಡೆ ಗೆಲವಿನ ಕೇಕೆ ಹಾಕಿತು. ಆ ಮೂಲಕ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರಿಂದ ಡ್ರಾ ಮಾಡಿಕೊಳ್ಳುವಲ್ಲಿ ಆತಿಥೇಯರು ಯಶಸ್ವಿಯಾದರು. ಮೊದಲ ಇನಿಂಗ್ಸ್‍ನಲ್ಲಿ 68 ರನ್‍ಗಳ ಮುನ್ನಡೆ ಸಾಧಿಸಿದ್ದ ಇಂಗ್ಲೆಂಡ್, ಎರಡನೇ ಇನಿಂಗ್ಸ್‍ನಲ್ಲಿ ಕೇವಲ 123 ರನ್‍ಗಳಿಗೆ ಆಲೌಟಾಯಿತು. ಹಾಗಾಗಿ, 192 ರನ್‍ಗಳ ಸಾಧಾರಣ ಗುರಿ ಪಡೆದಿದ್ದ ವೆಸ್ಟ್ ಇಂಡೀಸ್ 5 ವಿಕೆಟ್ ಕಳೆದುಕೊಂಡು ದಡ ಸೇರುವಲ್ಲಿ ಸಫಲವಾಯಿತು.
ಬ್ರಾವೊ ಮತ್ತು ಬ್ಲ್ಯಾಕ್‍ವುಡ್ ಐದನೇ ವಿಕೆಟ್ ಜೊತೆಯಾಟದಲ್ಲಿ 108 ರನ್ ಪೇರಿಸುವ ಮೂಲಕ ವೆಸ್ಟ್ ಇಂಡೀಸ್ ಗೆಲವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಬ್ಲ್ಯಾಕ್‍ವುಡ್ ಪಂದ್ಯಶ್ರೇಷ್ಠ ಹಾಗೂ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಸರಣಿಶ್ರೇಷ್ಠ ಗೌರವಕ್ಕೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


