ಕೊಹ್ಲಿ ಬ್ಯಾಟಿಂಗ್ ನೋಡಲು ಇಷ್ಟ: ಸ್ಮಿತ್
ಪ್ರಸಕ್ತ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಯಶಸ್ವಿ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್,

ಮುಂಬೈ: ಪ್ರಸಕ್ತ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಯಶಸ್ವಿ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, ಭಾರತದ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಓರ್ವ ಅತ್ಯುತ್ತಮ ಆಟಗಾರ. ಅವರ ಬ್ಯಾಟಿಂಗ್ ನೋಡಲು ನಾನು ಇಚ್ಚಿಸುತ್ತೇನೆ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅವರು ಸಾಕಷ್ಟು ಯಶಸ್ಸು ಸಾಧಿಸಿದ್ದಾರೆ ಎಂದು ಸ್ಮಿತ್ ತಿಳಿಸಿದ್ದಾರೆ.
ಇನ್ನು ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ ತಂಡದ ಪರವಾಗಿ ಆಡುತ್ತಿರುವ ಸ್ಟೀವನ್ ಸ್ಮಿತ್ ತಂಡದ ಪ್ರದರ್ಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಟೂರ್ನಿಯನ್ನು ಅತ್ಯುತ್ತಮ ರೀತಿಯಲ್ಲೇ ಆರಂಭಿಸಿದ್ದೆವು. ಆರಂಭಿಕ ಐದು ಪಂದ್ಯಗಳಲ್ಲಿ ಗೆಲುವು, ನಂತರ, ಮಳೆಯಿಂದಾಗಿ ಪಂದ್ಯಗಳ ರದ್ದು ಹಾಗೂ ಕೆಲವು ಪಂದ್ಯಗಳಲ್ಲಿನ ಸೋಲು ಹಿನ್ನಡೆ ತಂದಿತಾದರೂ ತಂಡ ಉತ್ತಮ ಪ್ರದರ್ಶನ ನೀಡಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ತಂಡದಲ್ಲಿ ರಾಹುಲ್ ಡ್ರಾವಿಡ್ ಎಲ್ಲ ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಅನುಭವ ತಂಡಕ್ಕೆ ಸಿಕ್ಕ ಪ್ಲಸ್ ಪಾಯಿಂಟ್. ಭಾರತದಲ್ಲಿನ ಪರಿಸ್ಥಿತಿಯಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕು ಎಂಬುದನ್ನು ಅವರಿಂದ ಕಲಿತಿದ್ದೇವೆ ಎಂದರು. ಇನ್ನು ಅಜಿಂಕ್ಯಾ ರಹಾನೆ ಬ್ಯಾಟಿಂಗ್ ಅನ್ನು ಸಹ ಮುಕ್ತವಾಗಿ ಹೊಗಳಿದ ಸ್ಮಿತ್, ಅವರು ಅತ್ಯುತ್ತಮ ಆಟಗಾರ. ಆಸ್ಟ್ರೇಲಿಯಾ ಪ್ರವಾಸದ ಸರಣಿ ಟೆಸ್ಟ್, ಏಕದಿನ ವಿಶ್ವಕಪ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈಗ ಐಪಿಎಲ್ ನಲ್ಲೂ ತಮ್ಮ ಸಾಮರ್ಥ್ಯ ತೋರಿದ್ದಾರೆ. ಶೇನ್ ವ್ಯಾಟ್ಸನ್ ಅವರೊಂದಿಗೆ ರಹನಾ ಉತ್ತಮ ಆರಂಭ ನೀಡುತ್ತಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


