ಬಾಂಗ್ಲಾಗೆ ಬೃಹತ್ ಸವಾಲು
ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳ ನಡುವಿನ ಟೆಸ್ಟ್ ಪಂದ್ಯ ನಿರ್ಣಾಯಕ ಹಂತ ತಲುಪಿದೆ.

ಮೀರ್‍ಪುರ: ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳ ನಡುವಿನ ಟೆಸ್ಟ್ ಪಂದ್ಯ ನಿರ್ಣಾಯಕ ಹಂತ ತಲುಪಿದೆ.
ಪಾಕಿಸ್ತಾನ ತಂಡ, ತನ್ನ ಮೊದಲ ಇನಿಂಗ್ಸ್ ನಲ್ಲಿ ಪೇರಿಸಿದ್ದ 557 ರನ್ ಮೊತ್ತಕ್ಕೆ ಪ್ರತಿಯಾಗಿ ತನ್ನ ಪಂದ್ಯದ ಎರಡನೇ ದಿನವಾದ ಗುರುವಾರ ತನ್ನ ಮೊದಲ ಇನಿಂಗ್ಸ್ ಆರಂಭಿಸಿದ್ದ ಬಾಂಗ್ಲಾದೇಶ, ಶುಕ್ರವಾರವೂ ತನ್ನ ಇನಿಂಗ್ಸ್ ಮುಂದುವರಿಸಿ 203 ರನ್‍ಗಳಿಗೆ ಆಲೌಟ್ ಆಯಿತು. ತದನಂತರ, ತನ್ನ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಪಾಕಿಸ್ತಾನ, 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡು, ಬಾಂಗ್ಲಾದೇಶಕ್ಕೆ ದ್ವಿತೀಯ ಇನಿಂಗ್ಸ್ ಆರಂಭಿಸಲು ಅವಕಾಶ ಮಾಡಿಕೊಟ್ಟಿತು.
ಹಾಗಾಗಿ, ಗೆಲವಿಗಾಗಿ ಒಟ್ಟು 550 ರನ್ ಗುರಿಯೊಂದಿಗೆ ಶುಕ್ರವಾರ ದಿನಾಂತ್ಯದ ಹೊತ್ತಿಗೆ ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾ, ದಿನಾಂತ್ಯದ ಹೊತ್ತಿಗೆ ಒಂದು ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


