ಭಾರತ, ಪಾಕ್ ಮೊದಲ ಟೆಸ್ಟ್ ಕೋಲ್ಕತಾದಲ್ಲಿ?
ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸರಣಿ ಆಡುವುದಾದರೆ, ಭಾರತದಲ್ಲೇ ನಡೆಸಲು ಬಿಸಿಸಿಐ ಜಗಮೋಹನ್ ದಾಲ್ಮಿಯಾ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ...

ನವದೆಹಲಿ : ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸರಣಿ ಆಡುವುದಾದರೆ, ಭಾರತದಲ್ಲೇ ನಡೆಸಲು ಬಿಸಿಸಿಐ ಜಗಮೋಹನ್ ದಾಲ್ಮಿಯಾ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ
ಈ ¸ಸರಣಿ ನಿರ್ಧಾರವಾದರೆ ಮೊದಲ ಟೆಸ್ಟ್ ಪಂದ್ಯವನ್ನು ಕೋಲ್ಕತಾದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕಳೆದ ಭಾನುವಾರ ಭಾರತಕ್ಕೆಆಗಮಿಸಿದ್ದ ಪಿಸಿಬಿ ಅಧ್ಯಕ್ಷ ಶಹರಿಯಾರ್ ಖಾನ್, ಮುಂಬರುವ ಡಿಸೆಂಬರ್‍ನಲ್ಲಿ ಭಾರತದೊಂದಿಗೆ ಸರಣಿ ಆಯೋಜಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅಲ್ಲದೆ ಸರಣಿಯನ್ನು ಯುಎಇನಲ್ಲಿ ನಡೆಸುವ ಪ್ರಸ್ತಾಪವನ್ನು ಬಿಸಿಸಿಐ ಮುಂದಿಟ್ಟಿದ್ದರು. ಸರಣಿಯ ಆಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಪ್ರಮುಖವಾಗಿದೆ. ಆದರೂ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ಕದನವನ್ನು ವಿಶ್ವವೇ ಕಾತುರದಿಂದ ಕಾಯುತ್ತಿದೆ ಎಂದು ಪಿಸಿಬಿ ಅಧ್ಯಕ್ಷ ತಿಳಿಸಿದ್ದರು. ಪಿಸಿಬಿ ಅಧ್ಯಕ್ಷ ಖಾನ್ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರೊಂದಿಗೂ ಸಹ ಚರ್ಚೆ ನಡೆಸಿದ್ದಾರೆ. ಈ ಮಾತುಕತೆ ವೇಳೆ ಉಭಯ ಮಂಡಳಿಗಳು ಪ್ರಸಾರಕರು ಹಾಗೂ ಇತರೆ ವಿಷಯಗಳ ಕುರಿತು ಒಮ್ಮತ ನಿರ್ಧಾರಕ್ಕೆ ಬರುವಂತೆ ಜೇಟ್ಲಿ ಸೂಚಿಸಿದ್ದಾರೆ ಎಂದು ವರದಿಗಳು ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


