ಕ್ರೀಡೆ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ಕು ಆಟಗಾರರು ಭಾಗಿ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವವರ ಹೆಸರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ್ರೆ ಅದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ವರು ಪ್ರಮುಖ ಆಟಗಾರರ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ಕು ಆಟಗಾರರು ಭಾಗಿ
ಲಲಿತ್ ಮೋದಿ
Published On :

ವಿಶ್ವದ ಕ್ರಿಕೆಟ್ ಲೋಕದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಇಂಡಿಯನ್ ಪ್ರೀಮೀಯರ್ ಲೀಗ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಘಾತಕಾರಿ ಸುದ್ದಿಯನ್ನು ಹೊರ ಹಾಕಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ  ಭಾಗಿಯಾಗಿರುವವರ ಹೆಸರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ್ರೆ ಅದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ವರು ಪ್ರಮುಖ ಆಟಗಾರರ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಲಲಿತ್ ಮೋದಿ  ಐಪಿಎಲ್ ಪಿಕ್ಸಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ಕು ಪ್ರಮುಖ ಆಟಗಾರರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವ ಆಟಗಾರರು ಯಾರ್ಯಾರು ಎಂದು ಬಿಸಿಸಿಐ, ಐಸಿಸಿ, ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಗೊತ್ತಿದೆ. ಅದರೆ ಯಾರೊಬ್ಬರು ಆಟಗಾರರ ಹೆಸರನ್ನು ಹೇಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಫಿಕ್ಸಿಂಗ್ ನಲ್ಲಿ ಅಂತಾರಾಷ್ಟ್ರೀಯ ಆಟಗಾರರು ಭಾಗಿಯಾಗಿದ್ದಾರೆ ಎಂದಿದ್ದಾರೆ.
ಕೇವಲ ಆಟಗಾರರಲ್ಲದೇ ಸಿಎಸ್ ಕೆ ಹಾಗೂ ಮಂಡಳಿ ಸದಸ್ಯರು ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಎಷ್ಟನೇ ಓವರ್ ನಲ್ಲಿ ಫಿಕ್ಸಿಂಗ್ ನಡೆದಿದೆ ಎಂಬುದು ಅವರಿಗೆಲ್ಲಾ ತಿಳಿದಿದೆ ಎಂದು ಟ್ವೀಟರ್ ನಲ್ಲಿ ಹೇಳಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಈ ಎಲ್ಲಾ ಫಿಕ್ಸಿಂಗ್ ನ ಮಾಸ್ಟರ್ ಮೈಂಡ್ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.