ಫೈನಲ್ ಗೆ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 3 ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಗೆ ಸೋಲುಣಿಸಿ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ...

ರಾಂಚಿ:ಎಂಟನೇ ಆವೃತ್ತಿಯ ಐಪಿಎಲ್ ಟಿ -20 ಪಂದ್ಯಾವಳಿಯಲ್ಲೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವ ಕನಸಿಗೆ ಭಂಗ ತಂದುಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 3 ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಗೆ ಸೋಲುಣಿಸಿ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ. ಎಡಗೈ ಮಧ್ಯಮ ವೇಗಿ ಆಶಿಶ್ ನೆಹ್ರಾ ಹಾಗೂ ಆಸ್ಟ್ರೇಲಿಯಾದ ಮೈಕ್ ಹಸ್ಸಿ,ಎರಡು ಬಾರಿಯ ಚಾಂಪಿಯನ್ನರ ವಿಜಯೋತ್ಸವಕ್ಕೆ ಕಾರಣರಾದರು.
ಜೆಎಸ್ ಸಿಎ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು ಆರ್ ಸಿಬಿ ನೀಡಿದ್ದ 140 ರನ್ ಗಳ ಗುರಿ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ 19.5 ಒವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ವಿಜಯದ ಗೆರೆ ದಾಟುವಲ್ಲಿ ಸಫಲವಾಯಿತು.
ಆರಂಭಿಕ ಮೈಕ್ ಹಸ್ಸಿ 46 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಗಳಿದ್ದ 56 ರನ್ ಗಳಿಸಿ ಚೆನ್ನೈಗೆ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಚೆನ್ನೈ, 3ನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಕನಸಿನೊಂದಿಗೆ ಫೈನಲ್ ಗೆ ಕಾಲಿಟ್ಟಿತು.ಆರ್ ಸಿಬಿ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿ ಚೆನ್ನೈ ದಾಂಡಿಗರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಮೈಕ್ ಹಸ್ಸಿ ಅರ್ಧಶತಕ ಗಳಿಸಿದ್ದು, ಬೆಂಗಳೂರಿಗೆ ಸೋಲಿನ ದಾರಿ ತೋರಿಸಿತು. ಈ ಪಿಚ್ ಮೇಲೆ ಸುಲಭವಾಗಿ ಬ್ಯಾಟ್ ಮಾಡುವುದು ಕಷ್ಟವಾಗಿದ್ದರಿಂದ ಚೆನ್ನೈ ಸಹ ಪರದಾಡಿತು. ಒಂದು ವೇಳೆ ಆರ್ ಸಿಬಿ 160ರ ಆಸುಪಾಸಿನಲ್ಲಿ ರನ್ ಗಳಿಸಿದ್ದರೆ,ಗೆಲ್ಲುವ ಆವಕಾಶಗಳು ಹೆಚ್ಚಿರುತ್ತಿದ್ದವು.
ಫೈನಲ್ ಪಂದ್ಯ ನಾಳೆ ರಾತ್ರಿ 8 ಗಂಟೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


