ಟೀಂ ಇಂಡಿಯಾ ಆಟಗಾರರು ಫಿಟ್ನೆಸ್ ಸಾಮರ್ಥ್ಯ ತೋರಬೇಕು: ಬಿಸಿಸಿಐ
ಮುಂದಿನ ತಿಂಗಳು ಬಾಂಗ್ಲಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದ ಎಲ್ಲ ಆಟಗಾರರು ತಮ್ಮ ಫಿಟ್ನೆಸ್ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ ಎಂದು ಬಿಸಿಸಿಐ ಸ್ಪಷ್ಟ ಸೂಚನೆ ನೀಡಿದೆ...

ನವದೆಹಲಿ:ಮುಂದಿನ ತಿಂಗಳು ಬಾಂಗ್ಲಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದ ಎಲ್ಲ ಆಟಗಾರರು ತಮ್ಮ ಫಿಟ್ನೆಸ್ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ ಎಂದು ಬಿಸಿಸಿಐ ಸ್ಪಷ್ಟ ಸೂಚನೆ ನೀಡಿದೆ.
ಭಾರತ ತಂಡ ಜೂನ್ 7ರಂದು ಬಾಂಗ್ಲಾ ಪ್ರವಾಸಕ್ಕೆ ತೆರಳಲಿದ್ದು, ಜೂನ್ 6ರಂದು ಕೋಲ್ಕತ್ತಾದಲ್ಲಿ ಫಿಟ್ನೆಸ್ ಪರೀಕ್ಷೆ ನಡೆಯಲಿದೆ. ಈ ವೇಳೆ ತಂಡದ ಪ್ರತಿ ಆಟಗಾರ ಪರೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ ಎಂದು ಬಿಸಿಸಿಐ ತಿಳಿಸಿದ್ದಾಗಿ ಫಸ್ಟ್ ಪೋಸ್ಟ್ ವರದಿ ಮಾಡಿದೆ.
ಕಾರಣ: ಇತ್ತೀಚಿನ ಕೆಲವು ಸರಣಿಗಳಲ್ಲಿ ಆಟಗಾರರು ಸರಣಿಯ ಅರ್ಧದಲ್ಲೇ ಗಾಯದ ಹಾಗೂ ಫಿಟ್ನೆಸ್ ಸಮಸ್ಯೆ ಎದುರಿಸಿ ತಂಡದಿಂದ ಹೊರ ಬೀಳುತ್ತಿರುವ ಉದಾಹರಣೆಗಳು ಹೆಚ್ಚಾಗಿವೆ. ಹಾಗಾಗಿ ತಂಡದ ಎಲ್ಲ ಆಟಗಾರರು ಟೂರ್ನಿಯ ಆರಂಭಕ್ಕೂ ಮುನ್ನ ಫಿಟ್ನೆಸ್ ಸಾಬೀತುಪಡಿಸಲು ತಿಳಿಸಲಾಗಿದೆ.
ಈ ಕುರಿತು ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್, ಕಳೆದ ಕೆಲವು ಸರಣಿಗಳಲ್ಲಿ ಆಟಗಾರರು ಅರ್ಧದಲ್ಲೇ ಆಯಾಸಗೊಳ್ಳುತ್ತಿರುವುದನ್ನು ನೋಡಿದ್ದೇವೆ. ಮತ್ತೆ ಆ ರೀತಿಯಾದ ಪ್ರಕರಣ ಬಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


