ಕ್ರೀಡೆ

ಲಂಕಾ ಮಡಿಲಿಗೆ ಏಕದಿನ ಸರಣಿ ಪ್ರಶಸ್ತಿ

ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಶಿಸ್ತುಬದ್ಧ ಬೌಲಿಂಗ್ ಪ್ರದರ್ಶನ ನೀಡಿದ ಆತಿಥೇಯ ಶ್ರೀಲಂಕಾ, ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ.

ಲಂಕಾ ಮಡಿಲಿಗೆ ಏಕದಿನ ಸರಣಿ ಪ್ರಶಸ್ತಿ
ಶ್ರೀಲಂಕಾ
Published On :

ಕೊಲಂಬೋ: ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಶಿಸ್ತುಬದ್ಧ ಬೌಲಿಂಗ್ ಪ್ರದರ್ಶನ ನೀಡಿದ ಆತಿಥೇಯ ಶ್ರೀಲಂಕಾ, ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ.
ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್ ಗಳ ಜಯ ಸಾಧಿಸಿದೆ. ಆ ಮೂಲಕ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಅಂತಿಮ ಪಂದ್ಯ ಬಾಕಿ ಉಳಿದಿರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದ ವೇಳೆ ಮಳೆ ಸುರಿದ ಪರಿಣಾಮ ಪಂದ್ಯವನ್ನು 38 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಹಾಗಾಗಿ ವೆಸ್ಟ್ ಇಂಡೀಸ್ 37 .4 ಓವರ್ ಗಳಲ್ಲಿ 214 ರನ್ ಗಳಿಗೆ ಅಲೌಟ್ ಆಯಿತು. ವಿಂಡೀಸ್ ಇನ್ನಿಂಗ್ಸ್ ಗೆ ಮಳೆ ಅಡ್ಡಿಪಡಿಸಿದ್ದರಿಂದ ಶ್ರೀಲಂಕಾ ತಂಡಕ್ಕೆ 225 ರನ್ ಗಳ ಪರಿಷ್ಕೃತ ಗುರಿಯನ್ನು ನೀಡಲಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ಲಂಕಾ ಬೆನ್ನಟ್ಟಿದ ಲಂಕಾ ಪಡೆ 36.3 ಓವರ್ ಗಳಲ್ಲಿ 2 ವಿಕೆಟ್‍ಗೆ ರನ್ ಕಲೆ ಹಾಕುವ ಮೂಲಕ ಜಯಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.