ಡೇಲ್ ಸ್ಟೇನ್ ಅಲಭ್ಯ?
ಟೀಂ ಇಂಡಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಪರ ಆಡಬೇಕಿದ್ದ ವೇಗಿ ಡೇಲ್ ಸ್ಟೇಯ್ ನ, ತಮ್ಮ ತಂಡಕ್ಕೆ ಅಲಭ್ಯರಾಗುವ ಸಂಭವವಿದೆ...

Published On :
ಕೇಪ್‍ಟೌನ್: ಟೀಂ ಇಂಡಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಪರ ಆಡಬೇಕಿದ್ದ ವೇಗಿ ಡೇಲ್ ಸ್ಟೇನ್, ತಮ್ಮ ತಂಡಕ್ಕೆ ಅಲಭ್ಯರಾಗುವ ಸಂಭವವಿದೆ. ಮೊಹಾಲಿ ಟೆಸ್ಟ್ ಪಂದ್ಯದ ಗುರುವಾರದ ದಿನದಾಟದಲ್ಲಿ ತೊಡೆ ಸಂದಿನ ನೋವಿಗೆ ತುತ್ತಾಗಿದ್ದ ಅವರು ವಿಶ್ರಾಂತಿಗೆ ಶರಣಾಗಿದ್ದರು. ಶನಿವಾರ ಕೂಡ ನೋವಿನಲ್ಲೇ ಆಡಿರುವ ಅವರಿನ್ನೂ ಚೇತರಿಸಿಕೊಂಡಿಲ್ಲವಾದ್ದರಿಂದ ಅವರು ಭಾರತ ವಿರುದ್ಧದ ಟೆಸ್ಟ್ ಸರಣಿಯ ಮುಂದಿನ ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈಗಾಗಲೇ ಮೊಹಾಲಿ ಟೆಸ್ಟ್ ನಲ್ಲಿ ಸೋಲು ಕಂಡಿರುವ ಸ್ಟೇನ್ ಅಲಭ್ಯತೆ ಮತ್ತಷ್ಟು ಕಾಡಬಹುದು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


