ಕ್ರೀಡೆ

ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ಟೆಸ್ಟ್ ಪಂದ್ಯಕ್ಕೆ ವರುಣನ ಅವಕೃಪೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ನಡುವಿನ ಟೆಸ್ಟ್ ಪಂದ್ಯಕ್ಕೆ ವರುಣ ಅಡ್ಡಿ ಮಾಡಿದೆ...

ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ಟೆಸ್ಟ್ ಪಂದ್ಯಕ್ಕೆ ವರುಣನ ಅವಕೃಪೆ
ಚಿನ್ನಸ್ವಾಮಿ ಸ್ಟೇಡಿಯಂ
Published On :

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ನಡುವಿನ ಟೆಸ್ಟ್ ಪಂದ್ಯಕ್ಕೆ ವರುಣ ಅಡ್ಡಿ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಕಳೆದ 1 ವಾರದಿಂದ ಮೋಡ ಕವಿದ ವಾತಾವರಣವಿದೆ. ನಿನ್ನೆಯಿಂದ ಆರಂಭವಾದ ಎರಡನೇ ಟೆಸ್ಟ್ ನ ಎರಡನೇ ದಿನವಾದ ಇಂದು ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ.

ಭಾರತ ಸ್ಪಿನ್ ದಾಳಿಗೆ ತತ್ತರಿಸಿದ್ದ ದಕ್ಷಿಣ ಆಫ್ರಿಕಾ 214 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ಮೊದಲ ದಿನಾಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 80 ರನ್ ಪೇರಿಸಿ ದಿನದ ಗೌರವ ಮೊತ್ತವನ್ನು ದಾಖಲಿಸಿತ್ತು.

ಇಂದು ನಡೆಯಬೇಕಿದ್ದ ಎರಡನೇ ದಿನದಾಟ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದ್ದು, ಅಭಿಮಾನಿಗಳು ಮಳೆ ನಿಲ್ಲುವುದನ್ನು ಕಾಯತೊಡಗಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.