ಕ್ರೀಡೆ

ಎಟಿಪಿ ವಿಶ್ವ ಟೂರ್ ಫೈನಲ್ಸ್: ಬೋಪಣ್ಣಗೆ ಗೆಲುವು

ರೋಹನ್ ಬೋಪಣ್ಣ ಮತ್ತು ರೊಮೇನಿಯಾದ ಫ್ಲೋರಿನ್ ಮರ್ಜಿಯಾ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಮೊದಲ ಸುತ್ತಿನಲ್ಲೇ ಹಾಲಿ ಚಾಂಪಿಯನ್ ಬ್ರಯಾನ್ ಸಹೋದರರನ್ನು ಮಣಿಸಿದರು.

ಎಟಿಪಿ ವಿಶ್ವ ಟೂರ್ ಫೈನಲ್ಸ್: ಬೋಪಣ್ಣಗೆ ಗೆಲುವು
ಫ್ಲೋರಿನ್ ಮರ್ಜಿಯಾ - ರೋಹನ್ ಬೋಪಣ್ಣ
Published On :

ಲಂಡನ್: ಪ್ರತಿಷ್ಠಿತ ಎಟಿಪಿ ವಿಶ್ವ ಟೂರ್ ಫೈನಲ್ಸ್ ಟೂರ್ನಿಯಲ್ಲಿ ಮೊದಲ ಬಾರಿಗೆ ಜೋಡಿಯಾಗಿ ಕಣಕ್ಕಿಳಿದಿರುವ ಭಾರತದ ರೋಹನ್ ಬೋಪಣ್ಣ ಮತ್ತು ರೊಮೇನಿಯಾದ ಫ್ಲೋರಿನ್ ಮರ್ಜಿಯಾ ಆಕರ್ಷಕ ಪ್ರದರ್ಶನ ನೀಡುವ ಮೂಲಕ ಮೊದಲ ಸುತ್ತಿನಲ್ಲೇ ಹಾಲಿ ಚಾಂಪಿಯನ್ ಬ್ರಯಾನ್ ಸಹೋದರರನ್ನು ಮಣಿಸಿದರು.
ಸೋಮವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನ ಪಂದ್ಯದಲ್ಲಿ ಬೋಪಣ್ಣ ಮತ್ತು ಮರ್ಜಿಯಾ ಜೋಡಿ ಅಗ್ರಶ್ರೇಯಾಂಕಿತ ಅಮೆರಿಕದ ಬಾಬ್ ಮತ್ತು ಮೈಕ್ ಬ್ರಯಾನ್ ಸಹೋದರರನ್ನು 6-4, 6-3 ನೇರ ಸೆಟ್‍ಗಳಲ್ಲಿ ಮಣಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. ಇದೇ ವರ್ಷ ವಿಂಬಲ್ಡನ್ ಟೂರ್ನಿಯ ಕ್ವಾರ್ಟರ್ ಫೈನಲ್ ನಲ್ಲೂ ಬೋಪಣ್ಣ ಜೋಡಿ ಬ್ರಯಾನ್ ಸಹೋದರರನ್ನು ಮಣಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.