ಇಂದು ಬಿಸಿಸಿಐ ಮುಖ್ಯಸ್ಥ ಶಶಾಂಕ್, ಶಹರ್ಯಾರ್ ಖಾನ್ ಭೇಟಿ?
ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯ ಸರಣಿಯ ಬಗೆಗಿನ ನಿರೀಕ್ಷೆ ಮತ್ತೊಮ್ಮೆ ಕುಡಿಯೊಡೆದಿದೆ. ನ. 21ರಂದು ದುಬೈನಲ್ಲಿ, ಭಾರತೀಯ ಕ್ರಿಕೆಟ್ ಮಂಡಳಿ...

Published On :
ನವದೆಹಲಿ: ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯ ಸರಣಿಯ ಬಗೆಗಿನ ನಿರೀಕ್ಷೆ ಮತ್ತೊಮ್ಮೆ ಕುಡಿಯೊಡೆದಿದೆ. ನ. 21ರಂದು ದುಬೈನಲ್ಲಿ, ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷ ಶಶಾಂಕ್ ಮನೋಹರ್ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಶಹರ್ಯಾರ್ ಖಾನ್ ಭೇಟಿಯಾಗಿ ದ್ವಿಪಕ್ಷೀಯ ಸರಣಿ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಐಸಿಸಿಗೆ ಬಿಸಿಸಿಐನ ಪ್ರತಿನಿಧಿಯಾಗಿ ಹೊಸತಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಪಟ್ಟ ಕಚೇರಿ ಕೆಲಸ ಮುಗಿಸಲು ಶಶಾಂಕ್ ಮನೋಹರ್ ದುಬೈನಲ್ಲಿನ ಐಸಿಸಿ ಕೇಂದ್ರ ಕಚೇರಿಗೆ ಶುಕ್ರವಾರ ತೆರಳಿದ್ದಾರೆ. ಪ್ರಸ್ತುತ, ಶಹರ್ಯಾರ್ ಖಾನ್ ಸಹ ಕಾರ್ಯನಿಮಿತ್ತ ದುಬೈನಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DubaiದುಬೈPCBಪಿಸಿಬಿಶಹರ್ಯಾರ್ ಖಾನ್Shashank Manoharಶಶಾಂಕ್ ಮನೋಹರ್Shaharyar Khanಇಂಡೋ-ಪಾಕ್ ಸರಣಿInd-Pak series
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


