ಕ್ರೀಡೆ

ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಶಶಾಂಕ್ ಮನೋಹರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ...

ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಶಶಾಂಕ್ ಮನೋಹರ್
Published On :

ಮುಂಬಯಿ: ಜಗಮೋಹನ್ ದಾಲ್ಮಿಯಾ ಅವರು ನಿಧನ ದಿಂದ ತೆರವಾಗಿದ್ದ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಶಶಾಂಕ್ ಮನೋಹರ್ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಯ ವಿಶೇಷ ಮಹಾಸಭೆಯಲ್ಲಿ  ಶಶಾಂಕ್ ಮನೋಹರ್  ಬಿಸಿಸಿಐಯ  ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಶಶಾಂಕ್ ಅವರು ಮಾತ್ರ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಹುದ್ದೆಗೆ ಪೂರ್ವ ವಲಯದ ಎಲ್ಲ ಆರು ಅಸೋಸಿಯೇಶನ್ ಗಳು ಅವಿರೋಧವಾಗಿ ಮನೋಹರ್ ಅವರ ಹೆಸರನ್ನು ಸೂಚಿಸಿದ್ದರು. 58ರ ವರ್ಷದ ವಿದರ್ಭ ಮೂಲದ ವಕೀಲ ಮನೋಹರ್ ಎರಡನೇ ಬಾರಿ ಬಿಸಿಸಿಐ ಅಧ್ಯಕ್ಷ ಹುದ್ದೆಯನ್ನು ಸ್ವೀಕರಿಸಿದ್ದಾರೆ.

ಇಂದು ನಡೆದ ಬಿಸಿಸಿಐಯ ವಿಶೇಷ ಮಹಾಸಭೆ ಯಲ್ಲಿ ಶಶಾಂಕ್ ಅವರ ನೇಮಕವು ಕೇವಲ ಔಪಚಾರಿಕವಾಗಿ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.