ಯುನೈಟೆಡ್ ಎಫ್‌ಸಿ ವಿರುದ್ಧ ಬ್ಲಾಸ್ಟರ್ಸ್‌ಗೆ ಭರ್ಜರಿ ಜಯ
ಪಂದ್ಯದ ಆರಂಭದಲ್ಲಿ ಮಂದಗತಿಯ ಆಟ ಪ್ರದರ್ಶಿಸಿದರೂ ಎರಡನೇ ಅವಧಿಯಲ್ಲಿ ಆಕ್ರಮಣಕಾರಿ ಆಟದ ಮೂಲಕ ಎದುರಾಳಿ ತಂಡದ ಮೇಲೆ ಸವಾರಿ ಮಾಡಿದ ಕೇರಳ...

ಕೊಚ್ಚಿ: ಪಂದ್ಯದ ಆರಂಭದಲ್ಲಿ ಮಂದಗತಿಯ ಆಟ ಪ್ರದರ್ಶಿಸಿದರೂ ಎರಡನೇ ಅವಧಿಯಲ್ಲಿ ಆಕ್ರಮಣಕಾರಿ ಆಟದ ಮೂಲಕ ಎದುರಾಳಿ ತಂಡದ ಮೇಲೆ ಸವಾರಿ ಮಾಡಿದ ಕೇರಳ ಬ್ಲಾಸ್ಟರ್ಸ್ ತಂಡ ಇಂಡಿಯನ್ ಸೂಪರ್ ಲೀಗ್ ಟೂರ್ನಿಯಲ್ಲಿ ಗೆಲುವಿನ ಆರಂಭ ಮಾಡಿದೆ.
ಮಂಗಳವಾರ ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಕೇರಳ ಬ್ಲಾಸ್ಟರ್ಸ್ ತಂಡ 3-1 ಗೋಲುಗಳ ಅಂತರದಲ್ಲಿ ನಾರ್ಥ್‌ಈಸ್ಟ್ ಯುನೈಟೆಡ್ ಎಫ್‌ಸಿ ವಿರುದ್ಧ ಜಯ ಸಂಪಾದಿಸಿತು. ಆ ಮೂಲಕ ಯುನೈಟೆಡ್ ವಿರುದ್ಧ ಮೊದಲ ಬಾರಿಗೆ ಗೆದ್ದ ಸಾಧನೆ ಮಾಡಿದೆ.
ಕೇರಳ ಬ್ಲಾಸ್ಟರ್ಸ್ ತಂಡ ಪರ ಜೋಶು ಕುರಿಯಾಸ್(49ನೇ), ಮೊಹಮದ್ ರಾಫಿ(68ನೇ) ಮತ್ತು ಸ್ಯಾಂಚೆಸ್ ವ್ಯಾಟ್(72ನೇ) ನಿಮಿಷದಲ್ಲಿ ಗೋಲು ದಾಖಲಿಸಿದರು. ಇನ್ನು ನಾರ್ಥ್ ಈಸ್ಟ್ ಯುನೈಟೆಡ್ ತಂಡದ ಪರ ನಿಕೊಲಸ್ ವೆಲೆಜ್(82ನೇ) ಗೋಲು ದಾಖಲಿಸಿದರು.
ಕಳೆದ ಬಾರಿಯೂ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದರೂ ಕೇರಳ ಬ್ಲಾಸ್ಟರ್ಸ್ ತಂಡ ಯುನೈಟೆಡ್ ತಂಡದ ವಿರುದ್ಧ ಆಡಿದ್ದ ಎರಡೂ ಪಂದ್ಯಗಳಲ್ಲೂ ಗೆಲುವು ದಾಖಲಿ ಸಾಧ್ಯವಾಗಿರಲಿಲ್ಲ. ಅಲ್ಲದೆ ಮೊದಲ ಆವೃತ್ತಿಯಲ್ಲಿ ಯಾವುದೇ ಗೋಲು ಸಹ ಗಳಿಸಲು ಸಾಧ್ಯವಾಗಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


